Homeಮುಖಪುಟಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

ಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

- Advertisement -
- Advertisement -

ಹೊಸದಾಗಿ ಚುನಾಯಿತರಾದ 543 ಲೋಕಸಭಾ ಸದಸ್ಯರ ಪೈಕಿ 251 (ಶೇ.46) ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ ಮತ್ತು ಅವರಲ್ಲಿ 27 ಮಂದಿ ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಣೆ ಮಾಡಿದೆ.

ಈ ಬಾರಿ, ಸಂಸತ್ತಿನ ಕೆಳಮನೆಗೆ ಚುನಾಯಿತರಾದ ಅತಿ ಹೆಚ್ಚು ಮಂದಿ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್‌ ಹೇಳಿದೆ.

2019ರಲ್ಲಿ 233 (ಶೇ.43), 2014ರಲ್ಲಿ 185 (ಶೇ.34 ), 2009ರಲ್ಲಿ 162 (ಶೇ.30) ಮತ್ತು 2004ರಲ್ಲಿ 125 (ಶೇ.23 ) ಸಂಸದರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು.

ಎಡಿಆರ್ ಪ್ರಕಾರ, 2009ರಿಂದ ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಸಂಸದರ ಸಂಖ್ಯೆಯಲ್ಲಿ ಶೇ 55ರಷ್ಟು ಹೆಚ್ಚಳವಾಗಿದೆ.

ಈ ಬಾರಿ ಚುನಾಯಿತರಾದ 251 ಅಭ್ಯರ್ಥಿಗಳ ಪೈಕಿ 170 (ಶೇ.31) ಮಂದಿ ಅತ್ಯಾಚಾರ, ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

2009ರಿಂದ ಘೋಷಿತ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಸಂಸದರ ಸಂಖ್ಯೆಯಲ್ಲಿ 124 ರಷ್ಟು ಹೆಚ್ಚಳವಾಗಿದೆ.

2009ರಲ್ಲಿ 76 (ಶೇ.14), 2014ರಲ್ಲಿ 112 (ಶೇ.21), 2019ರಲ್ಲಿ 159 (ಶೇ.29) ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದರು.

ಈ ಬಾರಿ ಗೆದ್ದಿರುವ 27 ಮಂದಿ ತಾವು ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿರುವುದಾಗಿ ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಲ್ವರು ಮತ್ತು 27 ಮಂದಿ ಐಪಿಸಿಯ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳ ಶಿಕ್ಷೆಗೆ ಗುರಿಯಾಗಿರುವುದಾಗಿ ಘೋಷಿಸಿದ್ದಾರೆ.

ಸೆಕ್ಷನ್ 376ರ ಅಡಿ ಅತ್ಯಾಚಾರ ಪ್ರಕರಣದ ಎದುರಿಸುತ್ತಿರುವ ಇಬ್ಬರು ಸೇರಿ 15 ಮಂದಿ ಮಹಿಳೆಯರ ವಿರುದ್ದದ ಅಪರಾಧಗಳ ಆರೋಪಗಳನ್ನು ಎದುರಿಸುತ್ತಿದ್ದಾರೆ.

ನಾಲ್ವರು ಚುನಾಯಿತ ಸದಸ್ಯರು ಅಪಹರಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಮತ್ತು 43 ಮಂದಿ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ.

ಹದಿನೈದು ಸದಸ್ಯರು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರದ ಆರೋಪವನ್ನು ಎದುರಿಸುತ್ತಿರುವ ಇಬ್ಬರು ಸೇರಿದಂತೆ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ.

ಈ ಬಾರಿ ಚುನಾಯಿತರಾದ ಲೋಕಸಭೆ ಸದಸ್ಯರ ಪೈಕಿ ಶೇ. 4.4 ಮಂದಿ ಸ್ವಚ್ಚ ಹಿನ್ನೆಲೆ ಹೊಂದಿದ್ದರೆ, 15.3 ಶೇ ಸದಸ್ಯರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ.

18ನೇ ಲೋಕಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಯ 240 ಸಂಸದರಲ್ಲಿ 94 (ಶೇ.39) ಮಂದಿಯ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ ಎಂದು ಎಡಿಆರ್ ತಿಳಿಸಿದೆ. ಕಾಂಗ್ರೆಸ್‌ನ 99 ಸಂಸದರಲ್ಲಿ (ಶೇ.49) ಮಂದಿ, ಸಮಾಜವಾದಿ ಪಕ್ಷದ 21 (ಶೇ.45), ಟಿಎಂಸಿಯ 13 (ಶೇ.45), ಡಿಎಂಕೆಯ 13 (ಶೇ.59 ), ಟಿಡಿಪಿಯ 8 (ಶೇ.50), ಶಿವಸೇನೆಯ ಐವರು (‌ಶೇ.71) ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಬಿಜೆಪಿ 63 (ಶೇ.26) ಅಭ್ಯರ್ಥಿಗಳು, ಕಾಂಗ್ರೆಸ್‌ನ 32 (ಶೇ.32), ಎಸ್‌ಪಿಯ 17 (ಶೇ.46) ಟಿಎಂಸಿಯ 7 (ಶೇ. 24), ಡಿಎಂಕೆ 6 (ಶೇ.27), ಟಿಡಿಪಿ 5 (ಶೇ.31), ಶಿವಸೇನಾದ ನಾಲ್ವರು (ಶೇ.57) ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್ ವರದಿ ಮಾಡಿದೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...