Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...