Homeಮುಖಪುಟಮಧ್ಯಪ್ರದೇಶ: ಆಶ್ರಯ ಧಾಮದಿಂದ 26 ಬಾಲಕಿಯರು ನಾಪತ್ತೆ!

ಮಧ್ಯಪ್ರದೇಶ: ಆಶ್ರಯ ಧಾಮದಿಂದ 26 ಬಾಲಕಿಯರು ನಾಪತ್ತೆ!

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್‌ನ ಮಕ್ಕಳ ಆಶ್ರಯ ಧಾಮದಿಂದ 26 ಬಾಲಕಿಯರು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಕರಣದ ಕುರಿತು ವಿಡಿಯೋ ಮೂಲಕ ಮಾಹಿತಿ ನೀಡಿರುವ ಭೋಪಾಲ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಪ್ರಮೋದ್ ಕುಮಾರ್ ಸಿನ್ಹಾ, ಇದುವರೆಗಿನ ತನಿಖೆಯಲ್ಲಿ ಬಾಲಕಿಯರು ಮನೆಗೆ ಹೋಗಲು ಇಚ್ಚಿಸಿದ್ದರಿಂದ ಪರ್ವಾಲಿಯಾ ಪ್ರದೇಶದ ಆಂಚಲ್ ಮಕ್ಕಳ ಆಶ್ರಯ ಧಾಮ ತೊರೆದಿರುವುದಾಗಿ ತಿಳಿದು ಬಂದಿದೆ ಎಂದಿದ್ದಾರೆ.

ಆಶ್ರಯ ಧಾಮದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಮತ್ತು ಮನೆ ನೆನಪಾದ ಹಿನ್ನೆಲೆ, ಹಲವು ಬಾಲಕಿಯರು ಬಿಟ್ಟು ಹೋಗಿದ್ದಾರೆ ಎಂದು ಇದುವರೆಗಿನ ತನಿಖೆಯಲ್ಲಿ ತಿಳಿದು ಬಂದಿದೆ. ಈ ಕುರಿತು ಕೂಲಕುಂಷವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಅಕ್ರಮವಾಗಿ ಆಶ್ರಯ ಧಾಮ ನಡೆಸುತ್ತಿದ್ದ ಆರೋಪದ ಮೇಲೆ ಅನಿಲ್ ಮ್ಯಾಥ್ಯೂ ಎಂಬಾತನ ವಿರುದ್ಧ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ರಾಮಗೋಪಾಲ್ ಯಾದವ್ ನೀಡಿದ ದೂರಿನ ಮೇರೆಗೆ ಪೊಲೀಸರು ಗುರುವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಭೋಪಾಲ್ ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಮಕ್ಕಳ ಆಶ್ರಯಧಾಮದಲ್ಲಿ 68 ಹುಡುಗಿಯರು ವಾಸವಿದ್ದರು. ಈ ಪೈಕಿ 26 ಮಂದಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಆಶ್ರಯಧಾಮದ ಮುಖ್ಯಸ್ಥ ಮ್ಯಾಥ್ಯೂ ವಿರುದ್ದ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ 2015 ರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮ್ಯಾಥ್ಯೂ ತನ್ನ ಆಶ್ರಯಧಾಮದ ನೋಂದಣಿ ಪ್ರಮಾಣಪತ್ರವನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗಿಯರ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...