Homeಕರ್ನಾಟಕರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

- Advertisement -
- Advertisement -
ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕದಲ್ಲಿ ನಡೆದ ನಕ್ಸಲ್ ಚಟುವಟಿಕೆಯಲ್ಲಿ ಇಲ್ಲಿಯವರೆಗೆ 38 ಮಂದಿ ಪ್ರಾಣ ತೆತ್ತಿದ್ದಾರೆ. ನಕ್ಸಲರು, ಪೊಲೀಸರು ಮತ್ತು ಎಎನ್ಎಫ್ ಮುಖಾಮುಖಿಯಲ್ಲಿ ಒಟ್ಟು 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ 20 ಮಂದಿ ನಕ್ಸಲರು, 8 ಮಂದಿ ನಾಗರಿಕರು ಹಾಗೂ 10 ಮಂದಿ ಪೊಲೀಸರು ಸೇರಿದ್ದಾರೆ.
ಪೊಲೀಸ್ ಮತ್ತು ಎಎನ್‌ಎಫ್ ಪಡೆಯಿಂದ ಹತ್ಯೆಯಾದ 20 ನಕ್ಸಲರ ಪಟ್ಟಿ
  • ಆಂಧ್ರ ಮೂಲದ ನಕ್ಸಲ್ ನಾಯಕ ಭಾಸ್ಕರ್ ಅವರನ್ನು ರಾಯಚೂರಿನಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು
  • ನಕಲ್ಸ್ ಕಾರ್ಯಕರ್ತ ರಾಯಚೂರಿನ ಬುಡ್ಡಣ್ಣ ಅವರ ಹತ್ಯೆಯಾಗಿತ್ತು
  • ನಕ್ಸಲ್ ವಲಯದಲ್ಲಿ ಸರಳ ಎಂದು ಚಿರಪರಿಚಿತರಾಗಿದ್ದ ಮೈಸೂರಿನ ರಾಜೇಶ್ವರಿಯವರು ಆಂಧ್ರದಲ್ಲಿ ನಕ್ಸಲ್ ಹೋರಾಟದ ಕುರಿತು ಅಧ್ಯಯನಕ್ಕೆ ಹೋಗಿದ್ದಾಗ ನಡೆದ ಎನ್ ಕೌಂಟರ್ ವೊಂದರಲ್ಲಿ 2001ರ ಜನವರಿಯಲ್ಲಿ ಹತರಾಗಿದ್ದರು. ಇವರು ಸಾಕೇತ್ ರಾಜನ್ ಅವರ ಬಾಳಸಂಗಾತಿಯಾಗಿದ್ದರು.
  • 2003ರ ನವೆಂಬರ್ 17ರಂದು ರಾಯಚೂರು ಜಿಲ್ಲೆಯ ಸಿಂಧನೂರಿನ ಹಾಜಿಮಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪಾರ್ವತಿ ಎಂಬಿಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.
  • 2005ರ ಫೆಬ್ರವರಿ 6ರಂದು ಮಾವೋವಾದಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಾಕೇತ್ ರಾಜನ್ ಪೊಲೀಸ್ ಎನ್‌ಕೌಂಟರ್‌ ಬಲಿಯಾಗಿದ್ದರು. ಇವರ ಅಂಗರಕ್ಷಕನಾಗಿದ್ದ ಸಿಂಧನೂರಿನ ಶಿವಲಿಂಗು ಅವರನ್ನು ಈ ಸಂದರ್ಭದಲ್ಲಿ ಹತ್ಯೆ ಮಾಡಲಾಗಿತ್ತು.

  • 2005ರ ಜೂನ್ 23ರಂದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹಳ್ಳಿಹೊಳೆ ಸಮೀಪದ ದೇವರಬಾಳು ಎಂಬಲ್ಲಿ ಪೊಲೀಸರ ಗುಂಡಿಗೆ ಬೆಳಗಾವಿಯ ಅಜಿತ್ ಕುಸುಬಿ ಮತ್ತು ಮೂಡಿಗೆರೆಯ ಉಮೇಶ್ ಬಣಕಲ್ ಬಲಿಯಾಗಿದ್ದರು.
  • 2006ರ ಡಿಸೆಂಬರ್ 25ರಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎಎನ್‌ಎಫ್‌ನಿಂದ ಹತ್ಯೆಯಾಗಿದ್ದರು.
  • 2007ರ ಜುಲೈ 10ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆ ತೋಟದ ಒಡೆಯರ ಮಠದಲ್ಲಿ ಸಿಂಧನೂರಿನ ಗೌತಮ್, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಸುಂದರೇಶ್, ರಾಮೇಗೌಡ್ಲು, ಮತ್ತು ಕಾವೇರಿಯವರನ್ನು ಎಎನ್ಎಫ್ ಹತ್ಯೆ ಮಾಡಿತ್ತು.
  • 2008ರ ನವೆಂಬರ್ 20ರಂದು ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಮಾವಿನಹೊಲದಲ್ಲಿ ಸೊರಬದ ಮನೋಹರ್, ನವೀನ್, ಅಭಿಲಾಷ್ ಹತ್ಯೆಯಾಗಿದ್ದರು.
  • 2010ರ ಮಾರ್ಚ್ 1ರಂದು ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿಯಲ್ಲಿ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಅವರನ್ನು ಹತ್ಯೆ ಮಾಡಲಾಗಿತ್ತು.
  • 2024ರ ನವೆಂಬರ್ 18ರಂದು ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು.
ನಕ್ಸಲರಿಂದ ಹತ್ಯೆಯಾದ 7 ಮಂದಿ ನಾಗರೀಕರು
  • ರಾಯಚೂರಿನಲ್ಲಿ ಶಂಕಿತ ನಕ್ಸಲರು ಸುದರ್ಶನ್ ರೆಡ್ಡಿಯವರನ್ನು ಹತ್ಯೆ ಮಾಡಿದ್ದರು.
  • 2005ರ ಮೇ17ರಂದು ಕೊಪ್ಪ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ಗಿರಿಜನ ಮುಖಂಡ ಶೇಷಪ್ಪಗೌಡ್ಲು ಹತ್ಯೆ
  • 2007ರ ಜೂನ್ 3ರಂದು ಶೃಂಗೇರಿಯ ಕಿಗ್ಗ ಸಮೀಪದ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ
  • 2008ರ ಮೇ 15ರಂದು ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ
  • 2008 ಡಿಸೆಂಬರ್ 7ರಂದು ಬೈಂದೂರಿನ ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದಿದ್ದರು.
  • 2011ರ ಡಿಸೆಂಬರ್ 28ರಂದು ಉಡುಪಿಯ ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
  • …………………………………………………………………………………
  • 2005ರ ಫೆಬ್ರವರಿ 10ರಂದು ತುಮಕೂರು ಜಿಲ್ಲೆ ಪಾವಗಡದಲ್ಲಿ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲಿನ ನಕ್ಸಲ್ ದಾಳಿಯಲ್ಲಿ ನಾಗರೀಕನೊಬ್ಬನ ಸಾವು
10 ಮಂದಿ ಪೊಲೀಸರ ಸಾವು
  • 2007ರ ಜುಲೈ 17ರಂದು ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ
  • 2008ರ ನವೆಂಬರ್ 20ರಂದು ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್‌ಕೌಂಟರ್‌ ವೇಳೆ ಪೇದೆ ಗುರುಪ್ರಸಾದ್ ಸಾವು
  • 2011ರ ಅಗಸ್ಟ್ 9ರಂದು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾ.ಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.
  • 2005ರ ಫೆಬ್ರವರಿ 10ರಂದು ರಾತ್ರಿ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟಿದ್ದ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಆಂಧ್ರ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಸಂದರ್ಭದಲ್ಲಿ ನಡೆದ ಈ ನಕ್ಸಲ್ ದಾಳಿಯಲ್ಲಿ 7 ಪೊಲೀಸರು ಸೇರಿ 8 ಜನ ಹತರಾಗಿದ್ದರು. 300ಕ್ಕೂ ಹೆಚ್ಚು ನಕ್ಸಲರ ತಂಡ ಒಮ್ಮೆಲೇ ದಾಳಿ ನಡೆಸಿತ್ತು.

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...