Homeಮುಖಪುಟಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

- Advertisement -
- Advertisement -

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು ಬೇರೆ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

27 ಮಕ್ಕಳಲ್ಲಿ ಇಬ್ಬರು ಇತ್ತೀಚೆಗೆ ಕಳ್ಳಸಾಗಣೆದಾರರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮನೆಗೆ ಹಿಂದಿರುಗಿದ ನಂತರ ತಮ್ಮ ಹೆತ್ತವರಿಗೆ ತಾವು ಪಟ್ಟ ಕಷ್ಟವನ್ನು ವಿವರಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ತನಿಖೆಯ ಭಾಗವಾಗಿ, ಆ ಗ್ರಾಮದ 11 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಾಣೆ ಮಾಡಲಾಗಿದೆ ಎಂದು ತಿಳಿಸಿದಾಗ, ಮಕ್ಕಳ ಗ್ರಾಮಕ್ಕೆ ತನಿಖಾ ತಂಡವನ್ನು ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ರೇಣು ತಿಳಿಸಿದ್ದಾರೆ. ಕಾಣೆಯಾಗಿದ್ದ ಗುಂಪಿನ ನಾಲ್ವರು ಮಕ್ಕಳು ಬುಧವಾರ ಮರಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

11 ಜನರಲ್ಲಿ ಐದು ಮಂದಿ ಇನ್ನೂ ನೇಪಾಳದಲ್ಲಿದ್ದಾರೆ, ಅವರನ್ನು ಮರಳಿ ಕರೆತರಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಎಸ್‌ಪಿ ಹೇಳಿದರು.

“ಜಿಲ್ಲೆಯ ಇತರ ಭಾಗಗಳಿಂದ 16 ಇತರ ಮಕ್ಕಳ ಬಗ್ಗೆ ಇದೇ ರೀತಿಯ ವರದಿ ನಮ್ಮ ಗಮನಕ್ಕೆ ಬಂದಿದೆ. ಆದರೆ ಇದುವರೆಗೆ ಯಾವುದೇ ದೂರು ಬಂದಿಲ್ಲ” ಎಂದು ರೇಣು ಹೇಳಿದರು.

ಕಳ್ಳಸಾಗಣೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು. ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಅಧಿಕಾರಿ ನಿರಾಕರಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...