Homeಮುಖಪುಟಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

ಗಾಝಾದ ನುಸಿರಾತ್‌ ಶಾಲೆ ಮೇಲೆ ಇಸ್ರೇಲ್‌ ದಾಳಿ: 27 ನಿರಾಶ್ರಿತರು ಸಾವು

- Advertisement -
- Advertisement -

ಇಸ್ರೇಲ್ ಗಾಝಾದಲ್ಲಿ ನರಮೇಧವನ್ನು ಮುಂದುವರಿಸಿದ್ದು, ಗಾಝಾ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಗೆ  27 ನಿರಾಶ್ರಿತರು ಬಲಿಯಾಗಿದ್ದಾರೆ. ಅಕ್ಟೋಬರ್ 7ರ ದಾಳಿಯಲ್ಲಿ ಭಾಗಿಯಾಗಿರುವ ಹಮಾಸ್‌ ಸಶಸ್ತ್ರದಾರಿಗಳನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್‌ ಹೇಳಿದರೆ, ಅಮಾಯಕ ನಿರಾಶ್ರಿತರನ್ನು ಹತ್ಯೆ ಮಾಡಲಾಗಿದೆ ಎಂದು ಗಾಝಾ ಮಾಧ್ಯಮಗಳು ವರದಿ ಮಾಡಿದೆ.

ಮಧ್ಯ ಗಾಝಾದ ನುಸಿರಾತ್‌ನಲ್ಲಿರುವ ಯುಎನ್ ಶಾಲೆಯಲ್ಲಿ ಹಮಾಸ್ ಕಮಾಂಡ್ ಪೋಸ್ಟ್ ಅಡಗಿಕೊಂಡಿದೆ ಎಂಬ ಇಸ್ರೇಲ್‌ನ ಹೇಳಿಕೆಗಳನ್ನು ಹಮಾಸ್ ಸರ್ಕಾರಿ ಮಾಧ್ಯಮ ಕಚೇರಿಯ ನಿರ್ದೇಶಕ ಇಸ್ಮಾಯಿಲ್ ಅಲ್-ತವಾಬ್ತಾ ತಿರಸ್ಕರಿಸಿದ್ದಾರೆ. ಡಜನ್‌ಗಟ್ಟಲೆ ನಿರಾಶ್ರಿತ ಜನರ ವಿರುದ್ಧ ನಡೆಸಿದ ಕ್ರೂರ ಅಪರಾಧವನ್ನು ಸಮರ್ಥಿಸಲು ಸುಳ್ಳು ಕಪೋಲಕಲ್ಪಿತ ಕಥೆಗಳನ್ನು ಇಸ್ರೇಲ್‌ ಹೇಳುತ್ತಿದೆ ಎಂದು ತವಾಬ್ತಾ ಹೇಳಿದ್ದಾರೆ.

ಇಸ್ರೇಲ್‌ ಫೈಟರ್ ಜೆಟ್‌ ದಾಳಿಯ ಮೊದಲು, ನಾಗರಿಕರಿಗೆ ಹಾನಿಯಾಗುವ ಅಪಾಯವನ್ನು ಕಡಿಮೆ ಮಾಡಲು ಮಿಲಿಟರಿ ಕ್ರಮಗಳನ್ನು ತೆಗೆದುಕೊಂಡಿದೆ. ಕದನ ವಿರಾಮ ಮಾತುಕತೆ ಸಂದರ್ಭದಲ್ಲಿ ದಾಳಿಗೆ ಯಾವುದೇ ಅಡ್ಡಿ ಇಲ್ಲ ಎಂದು ಇಸ್ರೇಲ್ ಹೇಳಿದೆ.

ಈ ಬೆಳವಣಿಗೆ ಕಳೆದ ವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಪ್ರಸ್ತಾಪಿಸಿದ ಒಪ್ಪಂದದ ಪ್ರಸ್ತಾಪಕ್ಕೆ ಸ್ಪಷ್ಟವಾದ ಹೊಡೆತವಾಗಿದೆ. ಹಮಾಸ್ ನಾಯಕ ಗಾಝಾದಲ್ಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಇಸ್ರೇಲ್‌ ಸೇನಾ ವಾಪಸಾತಿಗೆ ಆಗ್ರಹಿಸಿದ್ದರು.

ಕದನ ವಿರಾಮ ಒಪ್ಪಂದವನ್ನು ವಾಷಿಂಗ್ಟನ್ ಬಲವಾಗಿ ಸಮರ್ಥಿಸಿದೆ. CIA ನಿರ್ದೇಶಕ ವಿಲಿಯಂ ಬರ್ನ್ಸ್ ಕದನ ವಿರಾಮ ಪ್ರಸ್ತಾಪದ ಕುರಿತು ಚರ್ಚಿಸಲು ಮಧ್ಯವರ್ತಿಗಳಾದ ಕತಾರ್ ಮತ್ತು ಈಜಿಪ್ಟ್‌ನ ಹಿರಿಯ ಅಧಿಕಾರಿಗಳನ್ನು ಬುಧವಾರ ದೋಹಾದಲ್ಲಿ ಭೇಟಿಯಾಗಿದ್ದಾರೆ.

ನವೆಂಬರ್‌ನಲ್ಲಿ ಸಂಕ್ಷಿಪ್ತ ಕದನ ವಿರಾಮದ ನಂತರ ಕದನ ವಿರಾಮದ ಎಲ್ಲಾ ಪ್ರಯತ್ನಗಳು ಈವರೆಗೆ ವಿಫಲವಾಗಿವೆ. ಹಮಾಸ್ ಸಂಘರ್ಷಕ್ಕೆ ಶಾಶ್ವತ ಅಂತ್ಯದ ಬೇಡಿಕೆಯನ್ನು ಒತ್ತಾಯಿಸುತ್ತದೆ, ಆದರೆ ಇಸ್ರೇಲ್ ಹಮಾಸ್‌ನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಾಗಿ ಹೇಳಿಕೊಂಡಿದೆ. ಕಳೆದ ಹಲವು ದಿನಗಳಿಂದ ಕದನ ವಿರಾಮಗಳ ಬಗ್ಗೆ ಬಿಡೆನ್ ಪದೇ ಪದೇ ಘೋಷಿಸಿದ್ದಾರೆ. ಆದರೆ ಯಾವುದೇ ಕದನ ವಿರಾಮ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುವುದನ್ನು ಗಮನಿಸಬಹುದಾಗಿದೆ.

ಹಮಾಸ್ ಅ.7ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದ ಬಳಿಕ ಯುದ್ಧ ಘೋಷಿಸಿ ಇಸ್ರೇಲ್‌ ಗಾಝಾ ಮೇಲೆ ನಡೆಸಿದ ದಾಳಿಗೆ 36,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...