Homeಮುಖಪುಟ28 ಸರ್ಕಾರಿ ಸಂಸ್ಥೆಗಳನ್ನು ಮಾರಲು ಮುಂದಾದ ಕೇಂದ್ರ ಸರ್ಕಾರ!: ಕೇಂದ್ರ ಸಚಿವರೇ ಒಪ್ಪಿಕೊಂಡ್ರು...

28 ಸರ್ಕಾರಿ ಸಂಸ್ಥೆಗಳನ್ನು ಮಾರಲು ಮುಂದಾದ ಕೇಂದ್ರ ಸರ್ಕಾರ!: ಕೇಂದ್ರ ಸಚಿವರೇ ಒಪ್ಪಿಕೊಂಡ್ರು…

- Advertisement -
- Advertisement -

ಮೊನ್ನೆಯಷ್ಟೇ ಕೇಂದ್ರ ವಿತ್ತ ಸಚಿವೆ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ 2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿದ್ದರು. ಸತತ ಜಿಡಿಪಿ ಕುಸಿತ ಮತ್ತು ಆರ್ಥಿಕ ಕುಂಠಿತವನ್ನು ತಡೆಗಟ್ಟಲು ಹೆಣಗಾಡುತ್ತಿರುವ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಿ ಆದಾಯ ಕ್ರೋಢೀಕರಿಸುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಇವತ್ತು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು `ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾತ್ರವಲ್ಲದೆ 28 ವಿವಿಧ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ’ ಎಂಬುದಾಗಿ ಲೋಕಸಭೆಯಲ್ಲಿ ಹೇಳಿದ್ದಾರೆಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ಪ್ರಸಕ್ತ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ.5ಕ್ಕೆ ಕುಸಿಯಲಿದೆ: ಎಸ್‌ಬಿಐ ವರದಿ

2019-20ರ ವಿತ್ತೀಯ ವರ್ಷದಲ್ಲಿ ಸಂಗ್ರಹಿಸಲು ಉದ್ದೇಶಿಸಲಾಗಿದ್ದ 1.05 ಟ್ರಿಲಿಯನ್ ರೂಪಾಯಿ ಆದಾಯಕ್ಕೆ ಪ್ರತಿಯಾಗಿ ಸರ್ಕಾರ ಕೇವಲ 173.64 ಬಿಲಿಯನ್ ರೂಪಾಯಿಗಳನ್ನಷ್ಟೇ ಸಂಗ್ರಹಿಸಿದೆ ಎಂದು ಸಚಿವರು ಲಿಖಿತ ರೂಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ಅಂಶವನ್ನು ಉಲ್ಲೇಖಿಸಿದ್ದಾರೆ. ಈಗಾಗಲೇ ದೇಶದಲ್ಲಿ ಸರ್ಕಾರಿ ಸ್ವಾಮ್ಯಗಳ ಕಂಪನಿಗಳು ಕ್ಷೀಣಿಸಿದ್ದು ಮೂಲಭೂತ ಸೇವೆಗಳು ಸೇರಿದಂತೆ ಜೀವನ ನಿರ್ವಹಣೆ ತುಂಬಾ ದುಬಾರಿಯಾಗಿವೆ ಮತ್ತು ಸುಸ್ಥಿರ ಉದ್ಯೋಗಾವಕಾಶಗಳೂ ಕ್ಷೀಣಿಸಿವೆ. ಈಗ ಏಕಾಏಕಿ 28 ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದರೆ, ಜನರ ಜೀವನ ನಿರ್ವಹಣೆ ಮತ್ತಷ್ಟೂ ದುಬಾರಿಯಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಂಸ್ಥೆಗಳು ನಷ್ಟದಲ್ಲಿದ್ದರೆ, ಅವುಗಳನ್ನು ಪುನಶ್ಚೇತನಗೊಳಿಸಲು ಸರ್ಕಾರ ಉಪಕ್ರಮಗಳನ್ನು ಕೈಗೊಳ್ಳಬೇಕೆ ವಿನಾಃ, ಅದನ್ನೇ ನೆಪ ಮಾಡಿಕೊಂಡು ಹೀಗೆ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಸರ್ಕಾರ ಆದಾಯದ ಮೂಲಗಳನ್ನೇ ಕಳೆದುಕೊಂಡು, ಬೊಕ್ಕಸ ನಿರ್ವಹಣೆಗಾಗಿ ಜನರ ಮೇಲೆ ದುಬಾರಿ ತೆರಿಗೆ ವಿಧಿಸುವ ಸಂದರ್ಭ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆನ್ನೂ ತಜ್ಞರು ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...