Homeಮುಖಪುಟ29 ಸಾವಿರ ಜನರ ಮಾರಣಹೋಮ: ಗಾಝಾ 'ಸಾವಿನ ಮನೆ'ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

29 ಸಾವಿರ ಜನರ ಮಾರಣಹೋಮ: ಗಾಝಾ ‘ಸಾವಿನ ಮನೆ’ಯಾಗಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

“ಗಾಝಾ ಸಾವಿನ ಮನೆಯಾಗಿ ಮಾರ್ಪಟ್ಟಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಜಿನೀವಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿವೆ. ಬರೋಬ್ಬರಿ 29,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಕಾಣೆಯಾಗಿದ್ದಾರೆ, ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಭಾವಿಸಲಾಗಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಘೆಬ್ರೆಯೆಸಸ್ ತಿಳಿಸಿದ್ದಾರೆ.

ಅಪೌಷ್ಠಿಕತೆ ಹೆಚ್ಚಳ :

“ಅಕ್ಟೋಬರ್ 7ರಂದು ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದಲ್ಲಿ ಅಪೌಷ್ಠಿಕತೆಯ ಪ್ರಮಾಣ ಭಾರೀ ಹೆಚ್ಚಳವಾಗಿದೆ. ಕೆಲ ಪ್ರದೇಶಗಳಲ್ಲಿ ಶೇ.1ಕ್ಕಿಂತ ಕಡಿಮೆ, ಕೆಲ ಪ್ರದೇಶಗಳಲ್ಲಿ ಶೇ.15ಕ್ಕಿಂತ ಹೆಚ್ಚು ಅಪೌಷ್ಠಿಕತೆಯಿದೆ” ಎಂದು ಹೇಳಿದ್ದಾರೆ.

“ಯುದ್ಧ ಮುಂದುವರೆಯಲಿರುವ ಹಿನ್ನೆಲೆ, ಆಹಾರ ಸಾಮಗ್ರಿಗಳ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಇದರಿಂದ ಜನರಿಗೆ ಸರಿಯಾದ ಆಹಾರ ಸಿಗದೆ ಅಪೌಷ್ಠಿಕತೆಯ ಪ್ರಮಾಣ ಇನ್ನೂ ಹೆಚ್ಚಳವಾಗಬಹುದು. ಉತ್ತರ ಗಾಝಾ ಪ್ರದೇಶಕ್ಕೆ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ) ಯಂತಹ ಸಂಸ್ಥೆಗಳು ತೆರಳಲು ಸಾಧ್ಯವಾಗುತ್ತಿಲ್ಲ. ಮಾನವೀಯ ಸಿಬ್ಬಂದಿ ಮತ್ತು ಸಹಾಯವನ್ನು ಬಯಸುವವರಿಗೆ ಭದ್ರತೆಯ ಕೊರತೆಯಿಂದಾಗಿ ಡಬ್ಲ್ಯುಎಫ್‌ಪಿ ಅಲ್ಲಿ ತನ್ನ ಸಹಾಯ ವಿತರಣೆಯನ್ನು ಸ್ಥಗಿತಗೊಳಿಸಿದೆ” ಎಂದು ಘೆಬ್ರೆಯೆಸಸ್ ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನೆರವಿನ ಮೇಲೆ ದಾಳಿ :

ಯುದ್ಧದಿಂದ ಸಂತ್ರಸ್ತ ಜನರಿಗೆ ಸಹಾಯ ಒದಗಿಸುತ್ತಿರುವ ಸ್ವಯಂ ಸೇವಕರಿಗೆ ದೊಡ್ಡ ಭೀತಿ ಉಂಟಾಗಿದೆ. ನೂರಾರು ಮಾನವೀಯ ನೆರವಿನ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಮೆಡೆಸಿನ್ಸ್ ಸಾನ್ಸ್ ಫ್ರಾಂಟಿಯರ್ಸ್ (ಎಂಎಸ್‌ಎಫ್‌) ಶಿಬಿರದ ಮೇಲೆ ಮಂಗಳವಾರ (ಫೆ.20) ರಾತ್ರಿ (ಸ್ಥಳೀಯ ಕಾಲಮಾನ) ಶೆಲ್ ದಾಳಿ ನಡೆದಿದೆ. ಇರಿಂದ ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತುರ್ತು ಪರಿಹಾರ ಯೋಜನೆಯ ಸಂಯೋಜಕ ಮಾರ್ಟಿನ್ ಗ್ರಿಫಿತ್ಸ್, “ಗಾಝಾ ಮೇಲಿನ ದಾಳಿಯಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ. ಅಲ್ಲಿನ ಜನರ ದುಃಖದಲ್ಲಿ ಭಾಗಿಯಾಗಿದ್ದೇನೆ. ಇತರ ನಾಗರಿಕರಂತೆ ಮಾನವೀಯ ನೆರವು ಒದಗಿಸುತ್ತಿರುವ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಬೇಕು” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

‘ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ’?

ಮಾನವೀಯತೆಯ ಗಂಭೀರ ಅಪಾಯವನ್ನು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ. ಎಲ್ಲಾ ನಾಗರಿಕರನ್ನು ತುರ್ತಾಗಿ ರಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. “ಜನರಿಗೆ ಆಹಾರ, ನೀರು ಸಿಗುತ್ತಿಲ್ಲ. ಕನಿಷ್ಠ ಪಕ್ಷ ಸ್ವತಂತ್ರವಾಗಿ ಓಡಾಡಲು ಆಗುತ್ತಿಲ್ಲ. ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ?” ಎಂದು ಘೆಬ್ರೆಯೆಸಸ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ಧಾವಿಸುವ ಆರೋಗ್ಯ ಕಾರ್ಯಕರ್ತರು ಬಾಂಬ್ ದಾಳಿಯ ಅಪಾಯದಲ್ಲಿದ್ದಾರೆ. ಔಷಧಗಳ ಕೊರತೆಯಿಂದ ಆಸ್ಪತ್ರೆಗಳು ಮುಚ್ಚಲ್ಪಡುತ್ತಿವೆ. ಹಾಗಾದರೆ, ನಾವು ಯಾವ ಜಗತ್ತಿನಲ್ಲಿದ್ದೇವೆ?” ಎಂದು ಘೆಬ್ರೆಯೆಸಸ್ ಪುನರುಚ್ಚರಿಸಿದ್ದಾರೆ.

ತಕ್ಷಣದ ಕದನ ವಿರಾಮದ ಘೋಷಿಸಬೇಕು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಬಂದೂಕುಗಳು ಮೌನವಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...