2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 23 ರಿಂದ ಜೂನ್ 03ರ ವರೆಗೆ ನಡೆಸಲಾಗಿತ್ತು. ಇಂದು (ಮಂಗಳವಾರ) ಅದರ ಫಲಿತಾಂಶವು ಪ್ರಕಟವಾಗಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ವೆಬ್‌ಸೈಟ್ ಲಿಂಕ್‌ನಲ್ಲಿ ಪ್ರಕಟಿಸಲಾಗಿದೆ.
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:
ನೋಡಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಫಲಿತಾಂಶ ನೋಡಬಹುದು. ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.


