Homeಮುಖಪುಟ#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

#2RupeeBhakts ; ಬಿಜೆಪಿ ಐಟಿಸೆಲ್‌‌ನ ನಿಜಸ್ವರೂಪ ಬಿಚ್ಚಿಡುತ್ತಿರುವ ನೆಟ್ಟಿಗರು

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ #2RupeeBhakts ಟ್ರೆಂಡ್ ಆಗುತ್ತಿದ್ದು ಬಿಜೆಪಿ ಪಕ್ಷವು ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಂಡಿತು ಎಂಬ ಬಗ್ಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಸಿ ಅದಲ್ಲಿ ಹಾಕುವ ಒಂದೊಂದು ಪೋಸ್ಟ್ ಹಾಗೂ ಕಮೆಂಟುಗಳಿಗೆ ಬಿಜೆಪಿಯು ಹಣ ಪಾವತಿ ಮಾಡುತ್ತಿತ್ತು ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಪ್ರಸ್ತುತ ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ #2RupeeBhakts ಜನಪ್ರಿಯ ಟ್ರೆಂಡ್ ಆಗುತ್ತಿದ್ದು ಹಲವಾರು ಜನರು ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ: 2019 ರ ಲೋಕಸಭಾ ಚುನಾವಣೆಗೆ ಬಿಜೆಪಿ ವ್ಯಯಿಸಿದ್ದು ಎಷ್ಟು ಗೊತ್ತೇ ?

ರಾಘು ಬಿ ಹಿಂದೂ ಎಂಬ ಹೆಸರಲ್ಲಿರುವ ಫೇಸ್‌ಬುಕ್‌ ಖಾತೆದಾರರೊಬ್ಬ, “2014 ರಿಂದ ನನಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್‌ಗೂ 2 ರೂ. ಮತ್ತು ಪ್ರತಿ ಪೋಸ್ಟ್‌ಗೂ 3 ರೂ. ನಂತೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ ಅಕೌಂಟ್‌ಗೆ ಹಾಕುತ್ತಿದ್ದರು. ಆದರೆ ನನ್ನ ಆತ್ಮಸಾಕ್ಷಿ ಇತ್ತೀಚಿನ ದಿನಗಳಲ್ಲಿ ಒಪ್ಪುತ್ತಾ ಇರಲಿಲ್ಲ, ಎಂಜಲು ಕಾಸಿಗೋಸ್ಕರ ನನ್ನ ದೇಶವನ್ನು ಬಲಿಕೊಡಬಾರದೆಂದು ತಿರ್ಮಾನಿಸಿ ಹೊರಗಡೆ ಬಂದಿದ್ದೇನೆ.

ನಿಮಗಿದು ತಿಳಿದಿರಲಿ ಸಾಮಾಜಿಕ ಜಾಲತಾಣದಲ್ಲಿ ಅಸಹ್ಯವಾಗಿ ಕಮೆಂಟ್ ಮಾಡೋಕೆ ಅಂತಾನೆ ಈಗಿನ ಕೆಲವು ಮಂತ್ರಿಗಳ ನೇತೃತ್ವದಲ್ಲಿ ತಂಡವೊಂದು ಇದೆ. ಹುಡುಗಿಯರ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡೋದು ಬಿಜೆಪಿಗರ ಪ್ಲ್ಯಾನ್..ಸಧ್ಯ ನನ್ನ ಹಳೆಯ ಅಕೌಂಟ್ ಡಿಲೀಟ್ ಮಾಡಿ ಮತ್ತೊಮ್ಮೆ ಮನುಷ್ಯನಾಗಿ ಬದಲಾಗಿದ್ದೇನೆ” ಎಂದು ಬರೆದು ಕೊಂಡಿದ್ದಾರೆ.

2014ರಿಂದ ನಂಗೆ ಬಿಜೆಪಿ ಪಕ್ಷದವರು ಪ್ರತಿಯೊಂದು ಕಮೆಂಟ್ಗೂ 2 ರೂ ಮತ್ತು ಪ್ರತಿ ಪೋಸ್ಟ್ ಗೂ 3 ರೂ ಹಾಗೆ ಪ್ರತಿ ತಿಂಗಳ ಕೊನೆಯಲ್ಲಿ ನನ್ನ…

Posted by ರಾಘು ಬಿ ಹಿಂದೂ on Friday, August 21, 2020

ಚಂದ್ರಶೇಖರ್‌ ಶೆಟ್ಟಿ ಎಂಬವರು ಬಿಜೆಪಿ ಐಟಿ ಸೆಲ್‌ ಕಳುಹಿಸಿದ್ದಾರೆ ಎಂದು ಹೇಳಲಾದ ಮೆಸೇಜಿನ ಸ್ಕೀನ್ ಶಾರ್ಟ್ ಹಾಕಿ “ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ಭಕ್ತರೇ,2 ರೂಪಾಯಿ ಆಸೆಗೆ ಸುಳ್ಳು ಸುದ್ದಿ ಹಬ್ಬಿಸೋದು ಬಿಟ್ಟು ಕಾಂಗ್ರೆಸ್ ಪಕ್ಷ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ಹೋಗಿ ದಿನಕ್ಕೆ 275ರೂ ಸಿಗುತ್ತೆ#2RupeeBhakts

Posted by Chandrashekar Shetty on Saturday, August 22, 2020

ಮೊಹಮ್ಮದ್ ಅಝರ್‌ ಎನ್ನುವವರು, “ಎರಡು ರುಪಾಯಿಗೆ ತಬ್ಲೀಗ್‌ ಜಮಾತ್ ವಿಷಯದಲ್ಲಿ ಹಿಂದೂ ಮುಸ್ಲಿಮರ ನಡುವೆ ದ್ವೇಷವನ್ನು ಸೃಷ್ಟಿಸಿದವರು” ಎಂದು ಹೇಳಿದ್ದಾರೆ.

“18% ಜಿಎಸ್ಟಿ ಕಳೆದು ಪ್ರತಿ ಟ್ವೀಟ್‌ಗೆ ನಿಜವಾದ ಪಾವತಿ ಕೇವಲ 1.64 ರೂ.” ಎಂದು ಒಬ್ಬರು ಪ್ರಧಾನಿ ಮೋದಿಯ ಚಿತ್ರದ ಜೊತೆಗೆ ಟ್ವೀಟ್ ಮಾಡಿದ್ದಾರೆ.


ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...