Homeಮುಖಪುಟ3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

3 ಕೃಷಿ ಕಾನೂನುಗಳನ್ನು ವಾಪಾಸು ತರಬೇಕು: ಬಿಜೆಪಿ ಸಂಸದೆ ಕಂಗನಾ ರಣಾವತ್ ಆಗ್ರಹ

- Advertisement -
- Advertisement -

ರೈತ ಹೋರಾಟಕ್ಕೆ ಬೆದರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರದ್ದು ಮಾಡಿರುವ ಮೂರು ವಿವಾದಾತ್ಮಕ ರೈತ ವಿರೋಧಿ ಕಾನೂನನ್ನು ಕೇಂದ್ರ ಸರ್ಕಾರ ವಾಪಾಸು ತರಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಹೇಳಿದ್ದು, ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ. “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ ಮೂರು ಕೃಷಿ ಕಾನೂನುಗಳನ್ನು ಮತ್ತೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು.” ಎಂದು ಹಿಮಾಚಲ ಪ್ರದೇಶದ ತನ್ನ ಕ್ಷೇತ್ರ ಮಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿಯಾಗಿವೆ. ಆದರೆ ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯಿಂದಾಗಿ ಸರ್ಕಾರವು ಅದನ್ನು ರದ್ದುಗೊಳಿಸಿದೆ. ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ವಾಪಾಸು ಪರಿಚಯಿಸುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ರಾಜೀನಾಮೆ ಪ್ರಶ್ನೆಯೆ ಇಲ್ಲ’ | ಸಿದ್ದರಾಮಯ್ಯರಿಗೆ ಡಿಕೆ ಶಿವಕುಮಾರ್ ಬೆಂಬಲ

ರಣಾವತ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಪಕ್ಷವು ಅದನ್ನು ಎಂದಿಗೂ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. “ಮೂರು ಕರಾಳ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ 750 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ. ಇದನ್ನು ನಾವು ಎಂದಿಗೂ ಬಿಡುವುದಿಲ್ಲ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯನ್ನು ಬೆಟ್ಟು ಮಾಡಿದ ಅವರು, ಇದಕ್ಕೆ ಹರಿಯಾಣವೆ ಮೊದಲು ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್, “ಪ್ರಧಾನಿ ಮೋದಿಯ ಬಗ್ಗೆ ನನಗೆ ವಿಷಾದವಿದೆ.  ಕಂಗನಾ ಪ್ರಧಾನಿ ಮೋದಿ ಸವಾಲು ಹಾಕುತ್ತಿರುವಂತೆ ತೋರುತ್ತಿದೆ. ಅಥವಾ ಮೋದಿ ಅಸಹಾಯಕರಾಗಿದ್ದಾರೆ, ಇದನ್ನು ಬಿಜೆಪಿ ಮಾತ್ರ ಹೇಳಬಲ್ಲದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ನಟಿ ಮತ್ತು ಸಂಸದ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷ ಆಂದೋಲನದ ನಡೆಸಿದ್ದ ರೈತ ವಿರುದ್ಧ ಪದೇ ಪದೇ ಹೇಳಿಕೆ ನೀಡಿದ್ದರು. 2020 ರಲ್ಲಿ, ಕಂಗನಾ ರಣಾವತ್ ಅವರು ಪ್ರತಿಭಟನೆಗಳನ್ನು ರಾಜಕೀಯ ಪ್ರೇರಿತ ಎಂದು ಕರೆದಿದ್ದರು ಮತ್ತು ಈ ವಿಷಯದ ಬಗ್ಗೆ ಪಂಜಾಬಿ ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರೊಂದಿಗೆ ಸಾರ್ವಜನಿಕವಾಗಿ ಜಗಳವಾಡಿದ್ದರು.

ಇತ್ತೀಚೆಗೆ, ಕಂಗನಾ ರಣಾವತ್ ಅವರು ರೈತ ಪ್ರತಿಭಟನೆಗಳಿಂದ “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗುತ್ತಿತ್ತು ಎಂದು ಹೇಳಿದ್ದರು ಮತ್ತು ಆಂದೋಲನದ ಸ್ಥಳಗಳಲ್ಲಿ ಮೃತ ದೇಹಗಳು ನೇಣು ಬಿಗಿದುಕೊಂಡಿತ್ತು ಹಾಗೂ ಅತ್ಯಾಚಾರಗಳು ನಡೆಯುತ್ತಿತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ವ್ಯಾಪಕ ಪ್ರತಿಭಟನೆಗೆ ವ್ಯಕ್ತವಾಗಿದ್ದು, ಬಿಜೆಪಿ ಅವರ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು ಮತ್ತು ಅಂತಹ ಹೇಳಿಕೆಗಳಿಂದ ಅವರನ್ನು ದೂರವಿರಲು ಒತ್ತಾಯಿಸಿತ್ತು.

ವಿಡಿಯೊ ನೋಡಿ: ಬಹಳ ಚೆಂದ ಹಾಡಿದ್ದೀರಿ ಮತ್ತು ಜೀವ ತುಂಬಿದ್ದೀರಿ ನಿಮಗೆ ಶರಣು ರಮೇಶ್ ಗಬ್ಬೂರ್ ಸರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...