Homeಮುಖಪುಟದೆಹಲಿ: ಆಸ್ಪತ್ರೆ ಪಾರ್ಕಿಂಗ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿ: ಆಸ್ಪತ್ರೆ ಪಾರ್ಕಿಂಗ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಸಂತ್ರಸ್ತ ಯುವತಿ ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರ ಭೇಟಿಗೆ ಬರುತ್ತಿದ್ದರು. ಜೊತೆಗೆ ರೋಗಿಯ ಆರೈಕೆಗಾಗಿ ಆಸ್ಪತ್ರೆಯ ಆಶ್ರಯ ಮನೆಯಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

- Advertisement -
- Advertisement -

ನವದೆಹಲಿಯ ರೋಹಿಣಿ ಪ್ರದೇಶದ ಆಸ್ಪತ್ರೆ ಪಾರ್ಕಿಂಗ್ ಸ್ಥಳದಲ್ಲಿ 30 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಲ್ಲಿ ರೋಹಿಣಿ ಏರಿಯಾದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಆಸ್ಪತ್ರೆ ಭದ್ರತಾ ಸಿಬ್ಬಂದಿ ಪ್ರಮುಖ ಆರೋಪಿಯಾಗಿದ್ದರೇ, ಮತ್ತಿಬ್ಬರು ಮಾಜಿ ಬೌನ್ಸರ್‌ಗಳಾಗಿದ್ದಾರೆ.

ಅಕ್ಟೋಬರ್ 30-31ರ ಮಧ್ಯರಾತ್ರಿ ರೋಹಿಣಿಯ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಆಸ್ಪತ್ರೆಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಎಂದು 30 ವರ್ಷದ ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಸಂತ್ರಸ್ತ ಯುವತಿಯು ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರ ಭೇಟಿಗೆ ಬರುತ್ತಿದ್ದರು. ಜೊತೆಗೆ ರೋಗಿಯ ಆರೈಕೆಗಾಗಿ ಆಸ್ಪತ್ರೆಯ ಆಶ್ರಯ ಮನೆಯಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಜಿ ಬೌನ್ಸರ್‌ಗಳು ಮತ್ತು ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್ ಯುವತಿಗೆ ಬೆದರಿಕೆ ಹಾಕಿದ್ದಾರೆ. ಪರಿಶೀಲನೆಯ ನೆಪದಲ್ಲಿ ಆಸ್ಪತ್ರೆಯ ಪಾರ್ಕಿಂಗ್‌ನಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಅವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಸಂತ್ರಸ್ತೆ ದೂರಿನ ನಂತರ, ಅಕ್ಟೋಬರ್ 31 ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೂವರನ್ನು ಮನೀಶ್ (22), ಪ್ರವೀಣ್ ತಿವಾರಿ (24), ಮತ್ತು ಕನ್ವರ್ ಪಾಲ್ (33) ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...