Homeಮುಖಪುಟಕ್ರಿಮಿನಲ್ ಕಾನೂನುಗಳ ತಿದ್ದುಪಡಿಗೆ ಲೋಕಸಭೆಯಲ್ಲಿ 3 ಮಸೂದೆಗಳ ಮಂಡನೆ

ಕ್ರಿಮಿನಲ್ ಕಾನೂನುಗಳ ತಿದ್ದುಪಡಿಗೆ ಲೋಕಸಭೆಯಲ್ಲಿ 3 ಮಸೂದೆಗಳ ಮಂಡನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 11 ರಂದು ಲೋಕಸಭೆಯಲ್ಲಿ ವಸಾಹತುಶಾಹಿ ಯುಗದ ಕಾನೂನುಗಳನ್ನು ಬದಲಿಸಲು ಮೂರು ಮಸೂದೆಗಳನ್ನು ಮಂಡಿಸಿದ್ದಾರೆ.

ಪ್ರಸ್ತಾವಿತ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಪರಿವರ್ತಿಸುತ್ತದೆ ಮತ್ತು ಭಾರತೀಯರ ಹಕ್ಕುಗಳನ್ನು ರಕ್ಷಿಣೆ ಮಾಡಲಿದೆ  ಎಂದು ಅವರು ಪ್ರತಿಪಾದಿಸಿದರು.

ಅವರು ಭಾರತೀಯ ನ್ಯಾಯ ಸಂಹಿತಾ (BNS) ಬಿಲ್-2023  ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮಸೂದೆ-2023 ಮತ್ತು ಭಾರತೀಯ ಸಾಕ್ಷಿ (BS) ಬಿಲ್- 2023 ನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಈ ಮೂಲಕ  ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಕ್ರಮವಾಗಿ ಬದಲಾಯಿಸಲಾಗುತ್ತದೆ ಎಂದು ಹೇಳಿದ್ದಾರೆ. ತ್ವರಿತ ನ್ಯಾಯ ಒದಗಿಸಲು ಮತ್ತು ಕಾನೂನು ವ್ಯವಸ್ಥೆಯನ್ನು ರಚಿಸಲು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆ ನೀಡಲಾಗುವುದು- ಅಮಿತ್ ಶಾ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...