ನವಜೋತ್ ಸಿಧು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಅಪಘಾತ: ಮೂವರು ಸಾವು, 60 ಮಂದಿ ಗಾಯಾಳು
PC:Amar Ujala

ಪಂಜಾಬ್‌ನ ಮೊಗ್ಗಾ ಜಿಲ್ಲೆಯಲ್ಲಿ ಘಟಿಸಿದ ಬಸ್ ಅಪಘಾತದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಪಕ್ಷದ ಕಾರ್ಯಕರ್ತರು ಹೊಸದಾಗಿ ನೇಮಕಗೊಂಡಿರುವ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ.

“ಮೊಗ್ಗಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸುವಂತೆ ಮೊಗ್ಗಾ ಜಿಲ್ಲಾಧಿಕಾರಿ ಅವರಿಗೆ ನಿರ್ದೇಶನ ನೀಡಿದ್ದೇನೆ” ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌ ಕಾಂಗ್ರೆಸ್‌ ಭಿನ್ನಮತ ಶಮನದತ್ತ; ರಾಜ್ಯಾಧ್ಯಕ್ಷರಾಗಿ ಸಿಧು ನೇಮಕ

ಚಂಡೀಗಢದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಜಿರಾದಿಂದ ಹೋಗುತ್ತಿದ್ದರು. ಅವರು ಹೋಗುತ್ತಿದ್ದ ಖಾಸಗಿ ಬಸ್‌ಗೆ ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸುಮಾರು 60 ಮಂದಿ ಗಾಯಾಳುಗಳಾಗಿದ್ದಾರೆ. 24 ಜನರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳದಲ್ಲಿ ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬಸ್ಸಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿವೆ.

3 Congress Workers, On Way To Navjot Sidhu Event, Killed In Bus Accident

ಗಾಯಗೊಂಡ ಎಲ್ಲರನ್ನು ರಕ್ಷಿಸಲಾಗಿದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಗಾಯಗೊಂಡಿರುವ ಕಾರಣದಿಂದಾಗಿ, ಎಲ್ಲಾ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿದೆ ಎಂದು ವರದಿಯಾಗಿದೆ.

ನವಜೋತ್ ಸಿಂಗ್ ಸಿಧು ಶುಕ್ರವಾರ (ಜುಲೈ 23) ಪಂಜಾಬ್‌ ಕಾಂಗ್ರೆಸ್‌ನ ನೂತನ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವಿನ ಭಿನ್ನಮತ ಶಮನಕ್ಕೆ ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಇಂದಿನ ಕಾರ್ಯಕ್ರಮಕ್ಕೆ ಮುನ್ನ ಸಿಧು ಮತ್ತು ಅಮರಿಂದರ್‌ ಸಿಂಗ್ ಚಹಾ ಪಾರ್ಟಿಯಲ್ಲಿ ಮುಖಾಮುಖಿಯಾಗಿದ್ದಾರೆ.


ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

LEAVE A REPLY

Please enter your comment!
Please enter your name here