Homeಮುಖಪುಟಅಂಬೇಡ್ಕರ್‌ ಪೋಟೋ ಇದ್ದ ಧ್ವಜಕ್ಕೆ ಅವಮಾನ: ಮೂವರು ಆರೋಪಿಗಳ ಬಂಧನ

ಅಂಬೇಡ್ಕರ್‌ ಪೋಟೋ ಇದ್ದ ಧ್ವಜಕ್ಕೆ ಅವಮಾನ: ಮೂವರು ಆರೋಪಿಗಳ ಬಂಧನ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಧ್ವಜಕ್ಕೆ ಅವಮಾನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉತ್ತರಪ್ರದೇಶದ ಬಲ್ಲಿಯಾದಲ್ಲಿ ಭೀಮರಾವ್ ಅಂಬೇಡ್ಕರ್ ಅವರ ಪೋಟೋ ಇರುವ ಧ್ವಜವನ್ನು ಅಪವಿತ್ರಗೊಳಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು, ಅಂಬೇಡ್ಕರ್ ಭಾವಚಿತ್ರ ಇದ್ದ ಧ್ವಜವನ್ನು ಕಿತ್ತೊಗೆದು ಆರೋಪಿಗಳು ಕಾಲಿನಿಂದ ತುಳಿದು ಅವಮಾನಿಸುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿತ್ತು.

ರಾಸ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮೂವರನ್ನು ಬಂಧಿಸಲಾಗಿದೆ.

ಈ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಫಹೀಂ ಖುರೇಷಿ ಅವರು ಪ್ರತಿಕ್ರಿಯಿಸಿದ್ದು, ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ವೀಡಿಯೊದಲ್ಲಿ ರಾಸ್ರಾದ ಪಕ್ವೈನಾರ್ ಗ್ರಾಮದ ಕೆಲವರು ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹೊಂದಿರುವ ಧ್ವಜವನ್ನು ಕಿತ್ತುಹಾಕಿ ಅವಮಾನಿಸಿದ್ದಾರೆ. ಈ ಕುರಿತು ಎಫ್‌ಐಆರ್‌ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಕೃತ್ಯಕ್ಕೆ ಪ್ರಚೋದನೆ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈವರೆಗೆ ಬಂಧಿತ ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಅಂಬೇಡ್ಕರ್‌ ಅವರಿಗೆ ಅವಮಾನಿಸಿರುವ ಕೃತ್ಯವು ಸಾಮಾಜಿಕ ಸಾಮರಸ್ಯವನ್ನು ಅಡ್ಡಿಪಡಿಸುವ ಗಂಭೀರವಾದ ಅಪರಾಧವಾಗಿದೆ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಓರ್ವ ಸಮಾಜ ಸುಧಾರಕ, ನ್ಯಾಯಶಾಸ್ತ್ರಜ್ಞ ಮತ್ತು ಭಾರತದ ಸಂವಿಧಾನದ ಶಿಲ್ಪಿ, ಅವರು ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆಯ ವಿರುದ್ಧ ಹೋರಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಭಾರತದಲ್ಲಿ ಅಂಚಿನಲ್ಲಿರುವ ಸಮುದಾಯಗಳ ಉನ್ನತಿಗೆ ಅವರ ಕೊಡುಗೆಗಳು ಅಪಾರ, ಇಂತಹ ಮಹಾನ್‌ ವ್ಯಕ್ತಿಗಳ ಪ್ರತಿಮೆ, ಪೋಟೋಗಳನ್ನು ಹೊಂದಿರುವ ಧ್ವಜವನ್ನು ಅಪವಿತ್ರಗೊಳಿಸುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಗೌರವಗೊಳಿಸುವುದು ಮಾತ್ರವಲ್ಲದೆ ಅವರು ಹೇಳಿ ಕೊಟ್ಟ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ.

ಇದನ್ನು ಓದಿ: ಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...