ಬಿಹಾರದ ಒಟ್ಟು ಮತದಾರರ ಸಂಖ್ಯೆಯಲ್ಲಿ 3 ಲಕ್ಷ ಹಠಾತ್ ಹೆಚ್ಚಳವಾಗಿರುವ ಕುರಿತು ದೇಶದಾದ್ಯಂತ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು, ಚುನಾವಣೆ ಘೋಷಣೆ ಮಾಡುವಾಗ ಬಿಹಾರದ ಮತದಾರರ ಸಂಖ್ಯೆ 7.42 ಕೋಟಿ ಇತ್ತು ಚುನಾವಣೆಯ ನಂತರ ಆ ಸಂಖ್ಯೆ 7.45 ಕೋಟಿಗೆ ಹೆಚ್ಚಳವಾಗಿರುವುದು ಹೇಗೆ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಚುನಾವಣೆ ಘೋಷಣೆಯಾದ ನಂತರ 3 ಲಕ್ಷ ಮತದಾರರನ್ನು ನಿಯಮಾನುಸಾರ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಸಮಜಾಯಿಸಿ ಕೊಟ್ಟಿದೆ.
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಂತರ ಸೆಪ್ಟೆಂಬರ್ 30ರಂದು ಪ್ರಕಟಿಸಲಾದ ಬಿಹಾರದ ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಸಂಖ್ಯೆ 7.42 ಕೋಟಿ ಇತ್ತು. ಅದನ್ನು ಆಧರಿಸಿ ಅಕ್ಟೋಬರ್ 6ರಂದು ನಾವು ಹೇಳಿಕೆ ನೀಡಿದ್ದೇವೆ ಎಂದು ಚುನಾವಣಾ ಆಯೋಗ ಹೇಳಿದೆ.
ಮುಂದುವರಿದು, ಆಯಾ ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ 10 ದಿನಗಳ ಮೊದಲು ಜನರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ಅರ್ಜಿ ಸಲ್ಲಿಸಬಹುದು. ಅವರು ಅರ್ಹರಾಗಿದ್ದಾರೆ ಸೇರಿಸಲಾಗುತ್ತದೆ. ಆ ರೀತಿಯೇ ಬಿಹಾರದಲ್ಲಿ ಚುನಾವಣೆ ಘೋಷಣೆಯಾದ ಬಳಿಕ 3 ಲಕ್ಷ ಜನರ ಹೆಸರನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಮರ್ಥಿಸಿಕೊಂಡಿದೆ.
ಅಕ್ಟೋಬರ್ 1ರಿಂದ ಆಯಾ ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಕ್ಕಿಂತ 10 ದಿನ ಮೊದಲು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ 3 ಲಕ್ಷ ಮತದಾರರ ಸಂಖ್ಯೆ ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ


