Homeಮುಖಪುಟರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ರೈಲ್ವೆ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಒಡಿಶಾ ರೈಲು ಅಪಘಾತದ ಬಗ್ಗೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು “ರೈಲ್ವೆಯಲ್ಲಿ 3 ಲಕ್ಷ ಹುದ್ದೆಗಳು ಖಾಲಿ ಇವೆ” ಎಂದು ಸೋಮವಾರ ಆರೋಪಿಸಿದ್ದಾರೆ.

ಜೂನ್ 2 ರಂದು ಮೂರು ರೈಲುಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. “ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರವು ಈ ವಿಷಯದ ಬಗ್ಗೆ ಕೇಂದ್ರೀಯ ಬ್ಯೂರೋ ತನಿಖೆಗೆ ಆದೇಶಿಸಿದೆ. ಆದರೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟಗೆ ತೆಗೆದುಕೊಂಡಿವೆ. ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರದ ಅಗತ್ಯವಿದೆ ಎಂದು ಒತ್ತಾಯಿಸಿವೆ.

ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದು, “ಈ ಅಪಘಾತವು ಪೂರ್ವ ಕರಾವಳಿ ರೈಲ್ವೆ ವ್ಯಾಪ್ತಿಯಲ್ಲಿ ಘಟಿಸಿದ್ದು, ಇಲ್ಲಿ ಸುಮಾರು 8,278 ಹುದ್ದೆಗಳು ಖಾಲಿ ಇವೆ” ಎಂದು ಉಲ್ಲೇಖಿಸಿದ್ದಾರೆ.

“ಪ್ರಧಾನಿ ಕಾರ್ಯಾಲಯ ಮತ್ತು ಕ್ಯಾಬಿನೆಟ್ ಸಮಿತಿಯೆರಡೂ ನೇಮಕಾತಿಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಹಿರಿಯ ಹುದ್ದೆಗಳ ವಿಷಯದಲ್ಲಿಯೂ ಇದು ನಿರಾಸಕ್ತಿ, ನಿರ್ಲಕ್ಷ್ಯವನ್ನು ಸರ್ಕಾರ ತೋರಿದೆ” ಎಂದು ಟೀಕಿಸಿದ್ದಾರೆ.

1990ರ ದಶಕದಲ್ಲಿ ರೈಲ್ವೆಯಲ್ಲಿ 18 ಲಕ್ಷ ಜನರಿಗೆ ಉದ್ಯೋಗವಿತ್ತು. ಈಗ ಈ ಸಂಖ್ಯೆಯನ್ನು 12 ಲಕ್ಷಕ್ಕೆ ಇಳಿಸಲಾಗಿದ್ದು, ಈ ಪೈಕಿ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ಉದ್ಯೋಗಗಳಿಗೆ ಕುತ್ತು ಬಂದಿದೆ. ಖಾಲಿ ಹುದ್ದೆಗಳಿಂದಾಗಿ ಅಪಾಯ ಬಂದೊದಗಿದೆ” ಎಂದು ಹೇಳಿದ್ದಾರೆ.

“ಕಳೆದ 9 ವರ್ಷಗಳಲ್ಲಿ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

2017-18 ಮತ್ತು 2020-21ರ ನಡುವಿನ ರೈಲು ಅಪಘಾತಗಳಲ್ಲಿ ನಾಲ್ಕರಲ್ಲಿ ಮೂರರಷ್ಟು ಅಪಘಾತಗಳು ರೈಲುಗಳು ಹಳಿ ತಪ್ಪಿದ್ದರಿಂದ ಸಂಭವಿಸಿವೆ ಎಂದು  ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರು ಸಲ್ಲಿಸಿರುವ ಇತ್ತೀಚಿನ ವರದಿಯ ಬಗ್ಗೆಯೂ ಖರ್ಗೆಯವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“2017-18ರ ನಡುವೆ, ಪೂರ್ವ ಕರಾವಳಿ ರೈಲ್ವೆಯಲ್ಲಿ ಸುರಕ್ಷತೆ ನಿಟ್ಟಿನಲ್ಲಿ ರೈಲು ಮತ್ತು ಟ್ರಾಕ್‌ ಪರೀಕ್ಷೆಯನ್ನು ಯಾವುದೇ ರೀತಿಯಲ್ಲೂ ನಡೆಸಲಾಗಿಲ್ಲ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ಹಿಂದಿನ ಕಾರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರೈಲ್ವೆ ಮಂಡಳಿ ನಿರ್ಧರಿಸಿರುವುದನ್ನು ಖರ್ಗೆ ಪ್ರಶ್ನಿಸಿದ್ದಾರೆ. ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಕಾನೂನು ಜಾರಿ ಸಂಸ್ಥೆಗಳು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಅವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

“ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ” ಎಂದು ಟೀಕಿಸಿದ್ದಾರೆ. “…ಹೆಚ್ಚುವರಿಯಾಗಿ, ಸಿಬಿಐನವರು ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆ ವಿಚಾರಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದಿದ್ದಾರೆ.

ಕಾನ್ಪುರದಲ್ಲಿ 2016ರಲ್ಲಿ ರೈಲು ಹಳಿ ತಪ್ಪಿ 150 ಪ್ರಯಾಣಿಕರು ಸಾವಿಗೀಡಾಗಿದ್ದನ್ನು ಖರ್ಗೆ ಉಲ್ಲೇಖಿಸಿದ್ದಾರೆ. ಆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

“2017ರ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘ಪಿತೂರಿ’ ನಡೆದಿದೆ ಎಂದು ತಮ್ಮಷ್ಟಕ್ಕೆ ತಾವೇ ಹೇಳಿಕೊಂಡಿರಿ. ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲಾಯಿತು. ಆದರೆ 2018ರಲ್ಲಿ ಎನ್ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆರೋಪಪಟ್ಟಿ ಸಲ್ಲಿಸಲು ನಿರಾಕರಿಸಿತು. ರಾಷ್ಟ್ರವು ಇನ್ನೂ ಕತ್ತಲೆಯಲ್ಲಿದೆ. 150 ಸಾವುಗಳಿಗೆ ಯಾರು ಹೊಣೆ?” ಎಂದು ಖರ್ಗೆ ಕೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...