Homeಮುಖಪುಟಸುಪ್ರೀಂ ಕೋರ್ಟ್‌: 9 ನೂತನ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ

ಸುಪ್ರೀಂ ಕೋರ್ಟ್‌: 9 ನೂತನ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮೊದಲ ಬಾರಿ ನ್ಯಾಯಾಧೀಶರಾಗಿ ಒಂಬತ್ತು ನ್ಯಾಯಾಧೀಶರು ಒಟ್ಟಿಗೆ ಮಂಗಳವಾರ (ಆಗಸ್ಟ್ 31) ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಸುಪ್ರೀಂ ಕೋರ್ಟ್ ಬಲ 33 ಕ್ಕೆ ಹೆಚ್ಚಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ.ರಮಣ ನೂತನ ನ್ಯಾಯಾಧೀಶರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ನ್ಯಾಯಮೂರ್ತಿ ಎ.ಎಸ್.ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾಯಮೂರ್ತಿ ಸಿ.ಟಿ ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ ಸುಂದ್ರೇಶ್ , ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪಿಎಸ್ ನರಸಿಂಹ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ಪ್ರಮಾಣವಚನ ಸ್ವೀಕರಿಸಿದ ಒಂಬತ್ತರಲ್ಲಿ ಮೂವರು ಮಹಿಳಾ ನ್ಯಾಯಾಧೀಶರಾಗಿದ್ದಾರೆ. ಇವರಲ್ಲಿ, ಕರ್ನಾಟಕದವರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು, ದೇಶದ ಮೊದಲ ಮಹಿಳಾ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 2027ರಲ್ಲಿ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.

1962 ರಲ್ಲಿ ಜನಿಸಿದ ನ್ಯಾಯಮೂರ್ತಿ ನಾಗರತ್ನ ಅವರು 1987ರ ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ್ದರು. ಸಾಂವಿಧಾನಿಕ ಕಾನೂನು, ವಾಣಿಜ್ಯ ಕಾನೂನು ಮತ್ತು ಆಡಳಿತಾತ್ಮಕ ಕಾನೂನುಗಳಿಗೆ ಸಂಬಂಧಿಸಿದ ವಕೀಲರಾಗಿ ಅಭ್ಯಾಸ ಮಾಡಿದರು. 2008ರ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾದರು.

ಫೆಬ್ರವರಿ 2008 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ಎರಡು ವರ್ಷಗಳ ನಂತರ ಫೆಬ್ರವರಿ 2010 ರಲ್ಲಿ ಖಾಯಂ ನ್ಯಾಯಾಧೀಶರಾದರು. 1989 ರಲ್ಲಿ ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿದ್ದ ನ್ಯಾಯಮೂರ್ತಿ ಇಎಸ್ ವೆಂಕಟರಾಮಯ್ಯ  ಅವರ ಮಗಳು ನ್ಯಾಯಮೂರ್ತಿ ನಾಗರತ್ನ.


ಇದನ್ನೂ ಓದಿ: ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...