Homeಮುಖಪುಟಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

- Advertisement -
- Advertisement -

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತ್ರಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ’ಸಂಚು ಪತ್ರ’ವೇ ಸಂಚಿನಿಂದ ಲ್ಯಾಪ್‌ಟಾಪ್ ಒಳಗೆ ನುಸುಳಿದೆ!

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರು ಇವರು!

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ವರದಿನ್ನು ಒಕ್ಕೂಟ ಸರ್ಕಾರ ನಿರಾಕರಿಸಿದ್ದು, ‘ಇದರಲ್ಲಿ ಸತ್ಯಾಂಶವಿಲ್ಲ, ನಿರಾಧಾರ’ ಎಂದು ಹೇಳಿದೆ. “2019 ರಲ್ಲಿ ಕೂಡಾ ಇದೇ ರೀತಿಯ ವರದಿ ಪ್ರಕಟವಾಗಿತ್ತು, ಈಗಿನ ಸುದ್ದಿ ಅದರ ಮುಂದುವರಿದ ಭಾಗ ಇದ್ದಂತೆ ಇದೆ. ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸಂಸ್ಥೆಗಳಿಗೆ ತೊಡಕು ಮಾಡುವ ಯತ್ನವಾಗಿದೆ” ಎಂದು ಒಕ್ಕೂಟ ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...