Homeಚಳವಳಿ2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

2021 ರಲ್ಲಿ 31 ಸಾವಿರ ಮಹಿಳಾ ದೌರ್ಜನ್ಯದ ದೂರುಗಳು ದಾಖಲು: ಅರ್ಧದಷ್ಟು ಯುಪಿಯಿಂದ ವರದಿ

- Advertisement -
- Advertisement -

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಅಪರಾಧಗಳಿಗೆ ಸಂಬಂಧಿಸಿದಂತೆ 2021 ರಲ್ಲಿ ಸುಮಾರು 31,000 ದೂರುಗಳನ್ನು ಸ್ವೀಕರಿಸಿರುವುದಾಗಿ ಎಂದು ರಾಷ್ಟ್ರೀಯ ಮಹಿಳಾ ಆಯೋಗ (NCW) ಹೇಳಿದೆ. ದಾಖಲಾಗಿರುವ ದೂರುಗಳಲ್ಲಿಅರ್ಧದಷ್ಟು ಉತ್ತರ ಪ್ರದೇಶದಿಂದ ವರದಿಯಾಗಿವೆ ಎಂದು ಎನ್‌ಸಿಡಬ್ಲ್ಯೂ ಹೇಳಿದೆ.

2020 ರಲ್ಲಿ ಮಹಿಳಾ ಆಯೋಗವು 23,722 ದೂರುಗಳನ್ನು ಸ್ವೀಕರಿಸಿತ್ತು. ಕಳೆದ ವರ್ಷ (2021) ಮಹಿಳೆಯರ ವಿರುದ್ಧದ ಅಪರಾಧಗಳ ಸಂಬಂಧಿಸಿದ ದೂರುಗಳ ಸಂಖ್ಯೆ ಶೇ.30 ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧಿಕೃತ ಡೇಟಾ ಪ್ರಕಾರ, 2021 ರಲ್ಲಿ ಸ್ವೀಕರಿಸಲಾಗಿರುವ 30,864 ದೂರುಗಳಲ್ಲಿ, ಗರಿಷ್ಠ 11,013 ಮಹಿಳೆಯರ ಭಾವನಾತ್ಮಕ ನಿಂದನೆಯನ್ನು ಗಣನೆಗೆ ತೆಗೆದುಕೊಳ್ಳುವ ಘನತೆಯಿಂದ ಬದುಕುವ ಹಕ್ಕಿಗೆ ಸಂಬಂಧಿಸಿವೆ. 6,633 ಕೌಟುಂಬಿಕ ಹಿಂಸೆ ಮತ್ತು 4,589 ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿವೆ.

ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ರಾಜ್ಯವು ಮಹಿಳೆಯರ ವಿರುದ್ಧದ ಅಪರಾಧಗಳ ದೂರುಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ 15,828, ದೆಹಲಿಯಲ್ಲಿ 3,336, ಮಹಾರಾಷ್ಟ್ರದಲ್ಲಿ 1,504, ಹರಿಯಾಣದಲ್ಲಿ 1,460 ಮತ್ತು ಬಿಹಾರದಲ್ಲಿ 1,456 ದೂರುಗಳು ದಾಖಲಾಗಿವೆ.

ಇದನ್ನೂ ಓದಿ: 204ನೇ ವರ್ಷದ ಭೀಮಾ ಕೋರೆಗಾಂವ್ ಸ್ಮರಣೆ: ಸಾವಿರಾರು ಜನರಿಂದ ಗೌರವ ಸಮರ್ಪಣೆ

ಅಂಕಿ ಅಂಶಗಳ ಪ್ರಕಾರ, ಘನತೆಯಿಂದ ಬದುಕುವ ಹಕ್ಕು ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ಎನ್‌ಸಿಡಬ್ಲ್ಯು ಸ್ವೀಕರಿಸಿದ ದೂರುಗಳ ಸಂಖ್ಯೆ 2014ರ ನಂತರ, ಇದೇ ಮೊದಲು ಅತಿ ಹೆಚ್ಚು ದೂರುಗಳು ದಾಖಲಾಗಿವೆ. 2014ರಲ್ಲಿ ಒಟ್ಟು 33,906 ದೂರುಗಳು ಬಂದಿದ್ದವು ಎಂದು ಅದು ಹೇಳಿದೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಈ ಹಿಂದೆ ಆಯೋಗವು ತನ್ನ ಕೆಲಸದ ಬಗ್ಗೆ ಜನರಿಗೆ ಹೆಚ್ಚು ಅರಿವು ಮೂಡಿಸುತ್ತಿರುವುದರಿಂದ ದೂರುಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದರು.

“ಆಯೋಗವು ಮಹಿಳೆಯರಿಗೆ ಸಹಾಯ ಮಾಡಲು ಹೊಸ ಕ್ರಮಗಳನ್ನು ಪ್ರಾರಂಭಿಸಸಿದ್ದು ಅದಕ್ಕಾಗಿ, ಅಗತ್ಯವಿರುವ ಮಹಿಳೆಯರಿಗೆ ಬೆಂಬಲ ಸೇವೆಗಳನ್ನು ಒದಗಿಸಲು ನಾವು ಸಹಾಯವಾಣಿಯನ್ನು ಪ್ರಾರಂಭಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.

2021ರ ಜುಲೈನಿಂದ ಸೆಪ್ಟೆಂಬರ್‌ವರೆಗೆ, ಪ್ರತಿ ತಿಂಗಳು 3,100 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. 2018 ರ ನವೆಂಬರ್‌ನಲ್ಲಿ 3,000 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಆ ಸಂದರ್ಭದಲ್ಲಿ #MeToo ಆಂದೋಲನವು ಉತ್ತುಂಗದಲ್ಲಿತ್ತು.

“ಈ ಹಿಂದೆ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿರಲಿಲ್ಲ. ಅವರು ಕಿರುಕುಳದಿಂದ ಏನು ಅನುಭವಿಸುತ್ತಿದ್ದಾರೆಂದು ಅವರಿಗೆ ತಿಳಿದಿರಲಿಲ್ಲ. ಆದರೆ ಈಗ ಅವರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಅವರು ತಮ್ಮ ಮೇಲಾಗುತ್ತಿರುವ ಕಿರುಕುಳಗಳನ್ನು ವರದಿ ಮಾಡಲು ಮುಂದೆ ಬರುತ್ತಿರುವುದು ಒಳ್ಳೆಯದು” ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್‌ AFSPA ವಿವಾದ; 45 ದಿನಗಳಲ್ಲಿ ‘ಸಕಾರಾತ್ಮಕ ಬೆಳವಣಿಗೆ’: ಅಸ್ಸಾಂ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...