Homeಕರ್ನಾಟಕಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್...

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್

- Advertisement -
- Advertisement -

ವಿವಿಧ ಜಾತಿಗಳ ಮುಂದೆ ‘ಕ್ರಿಶ್ಚಿಯನ್’ ಎಂಬ ಪದ ಸೇರಿಸಿದ್ದ ವಿಚಾರ ವಿವಾದ ಸ್ವರೂಪ ಪಡೆದ ಹಿನ್ನೆಲೆ,
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಿಂದ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಸೇರಿದಂತೆ 33 ಜಾತಿಗಳನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಬಿಟ್ಟಿದೆ.

ಭಾನುವಾರ (ಸೆ.21) ದೇವರಾಜು ಅರಸು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌, “ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯದಾದ್ಯಂತ ಪ್ರಾರಂಭಗೊಳ್ಳಲಿದೆ. ಇದರಲ್ಲಿ ಪಟ್ಟಿ ಮಾಡಿರುವ 1,561 ಜಾತಿಗಳ ಪೈಕಿ 33 ಜಾತಿಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ಸಮೀಕ್ಷೆಯಲ್ಲಿ ಇದ್ದ ಮಾಹಿತಿ, ಕಲಂಗಳನ್ನೇ ಉಪಯೋಗಿಸಿಕೊಂಡು ಸಮೀಕ್ಷೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಉಲ್ಲಂಘನೆ ಆಗಿಲ್ಲ. ಈ ಮಾಹಿತಿಯನ್ನು ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಬಗ್ಗೆ ತಿಳಿಯಲು ಸಂಗ್ರಹಿಸಿತ್ತಿದ್ದೇವೆಯೇ ಹೊರತು, ಬೇರೆ ಉದ್ದೇಶಕ್ಕಾಗಿ ಉಪಯೋಗ ಮಾಡುವುದಿಲ್ಲ ಎಂದರು.

ಈ ಹಿಂದೆಯೇ ಆಯೋಗ ಸಮೀಕ್ಷೆ ನಡೆಸುವ ಮೊದಲೇ ಬಿಟ್ಟು ಹೋದ ಜಾತಿಗಳನ್ನು ಗಮನಕ್ಕೆ ತನ್ನಿ ಎಂದು ಜಾಗೃತಿ ಮೂಡಿಸುವ ಪ್ರಕಟಣೆಯೊಂದನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಇದಾದ ಬಳಿಕ ಅನೇಕರು ತಮ್ಮ ಜಾತಿಗಳನ್ನು ಪರಿಗಣಿಸುವಂತೆ ಕೋರಿದ್ದರು. ಅದರಂತೆ 148 ಜಾತಿಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

33 ಜಾತಿಗಳನ್ನು ಕೈಬಿಡಲಾಗಿದೆ ಎಂದರೆ ಅದನ್ನು ತೆಗೆದು ಹಾಕಿದ್ದೇವೆ ಎಂದಲ್ಲ. ಅರ್ಹ ಜಾತಿಯವರು ತಮ್ಮ ಮೂಲವನ್ನು ಸಮೀಕ್ಷೆದಾರರಿಗೆ ತಿಳಿಸಿ ಉಲ್ಲೇಖ ಮಾಡಬಹುದು ಎಂದೂ ಹೇಳಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುತ್ತವೆ. ಅದನ್ನು ಸಮೀಕ್ಷೆ ಮಾಡುವವರ ಮೊಬೈಲ್‌ಗೆ ಅಪ್ಲೋಡ್ ಮಾಡಲಾಗಿದೆ. ಅವುಗಳ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ಏನು ಪ್ರಶ್ನೆಗಳಿರುತ್ತವೆ ಎಂದು ನಾವು ಜನರಿಗೆ ತಿಳಿವಳಿಕೆ ಕೊಟ್ಟಿದ್ದೇವೆ. ಹ್ಯಾಂಡ್ ಬಿಲ್ ಪ್ರಿಂಟ್ ಮಾಡಿ ಮನೆ ಮನೆಗ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ ಎಂದರು.

ಏನಿದು ‘ಕ್ರಿಶ್ಚಿಯನ್’ ಜಾತಿ ವಿವಾದ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ನಾನಾ ಕಾರಣಕ್ಕಾಗಿ ಮೂಲ ಜಾತಿಯನ್ನೂ ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ಗುರುತಿಸಿಕೊಂಡಿರುವ ಜಾತಿಗಳ ಹೆಸರು ಆಯೋಗ ಪ್ರಕಟಿಸಿರುವ ಜಾತಿಗಳ ಪಟ್ಟಿಯಲ್ಲಿ ದಾಖಲಾಗಿತ್ತು.

ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್ ಸೇರಿದಂತೆ ಸುಮಾರು 46 ಜಾತಿಗಳ ಹೆಸರಿನೊಂದಿಗೆ ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದು ಕಂಡುಬಂದಿತ್ತು.

ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ನಾನಾ ಜಾತಿ- ಸಮುದಾಯಗಳ ನಾಯಕರು, ಸ್ವಾಮೀಜಿಗಳು ಕೂಡ ಮತಾಂತರದ ಬಳಿಕ ಹಿಂದೂ ಮೂಲ ಜಾತಿಯನ್ನು ಸೇರಿಸಿಕೊಂಡು ಕ್ರಿಶ್ಚಿಯನ್ ಎಂಬುದಾಗಿ ದಾಖಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಹಲವು ಸಚಿವರು, ಶಾಸಕರಿಂದಲೂ ಪರೋಕ್ಷವಾಗಿ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ಸಚಿವ ಸಂಪುಟ ಸಭೆಯಲ್ಲೂಈ ಬಗ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜನಾಭಿಪ್ರಾಯ, ಆಕ್ಷೇಪಗಳ ಬಗ್ಗೆ ಆಯೋಗದ ಗಮನಕ್ಕೆ ತಂದಿತ್ತು.

ಸೆ.22ರಿಂದ ಸಮೀಕ್ಷೆ

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಸೆ.22ರಿಂದ, ಅಂದರೆ ನಾಳೆಯಿಂದ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ ಶಿಕ್ಷಕರು, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಈಗಾಗಲೇ ಈ ಬಗ್ಗೆ ತರಬೇತಿ ನೀಡಲಾಗಿದೆ. ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ತಡ

ಬೆಂಗಳೂರಿನಲ್ಲಿ ಎರಡು ಮೂರು ದಿನ ಸಮೀಕ್ಷೆ ತಡವಾಗಿ ಆರಂಭ ಆಗಲಿದೆ. ತರಬೇತಿ ನೀಡುವುದಕ್ಕೆ ಒಂದು ವಾರ ತಡವಾಗಿದೆ. ಜೊತೆಗೆ ಜಿಬಿಎ ನೊಟಿಫಿಕೇಷನ್ ತಡ ಆಗಿದ್ದರಿಂದ ಇಲ್ಲಿ ತಡ ಆಗಿದೆ. ಬೆಂಗಳೂರು ನಗರದಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸಲಾಗಿದೆ. ಬೇರೆ ಇಲಾಖೆಯಿಂದಲೂ ನೇಮಕ ಮಾಡಲಾಗಿದೆ ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಧಾರ್ ಕಾರ್ಡ್‌ ಕಡ್ಡಾಯ

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರು ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದರೆ ಮಾತ್ರ ಸಮೀಕ್ಷೆಯಲ್ಲಿ ಪರಿಗಣಿಸಲಾಗುವುದು ಎಂದು ಮಧುಸೂದನ್ ನಾಯ್ಕ್ ತಿಳಿಸಿದ್ದಾರೆ.

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...