Homeಕರ್ನಾಟಕಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

ಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

- Advertisement -
- Advertisement -

ಗೃಹ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಮತ್ತು ಗೆಜೆಟೆಡ್‌ಯೇತರ ಸಿಬ್ಬಂದಿ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.

ಆಯೋಗವು ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, 2020ರ ವೇಳೆಗೆ ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಯಲ್ಲಿ ಮಹಿಳಾ ಪ್ರಾತಿನಿಧ್ಯವು ಕೇವಲ 8.3% ಇದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 2015 ರಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಸಲಹೆ ನೀಡಿತ್ತು.

ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆಗೆ ನಿಯಮಗಳನ್ನೂ ಸಹ ಆಯೋಗ ಶಿಫಾರಸು ಮಾಡಿದೆ.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯವನ್ನು ಖಾತ್ರಿಪಡಿಸದೆ ಹೊರಗುತ್ತಿಗೆ ಸಿಬ್ಬಂದಿಯನ್ನು ನಿಯೋಜಿಸುತ್ತಿವೆ. ಹೀಗಾಗಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆ ನೀಡಿದಾಗ ಎಸ್ಸಿ ಮತ್ತು ಎಸ್ಟಿಗಳಿಗೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಬಹುದು ಎಂದೂ ಕೂಡ ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯು 32 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಒದಗಿಸುತ್ತದೆ. ಆದರೆ, ನಾಗರಿಕರು ಸಾಮಾನ್ಯವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ಪೊಲೀಸರನ್ನು ಹತ್ತಿರ ತರುವ ಸಲುವಾಗಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸೇವಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಬಹುದು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ಪೊಲೀಸ್ ಕೈಪಿಡಿಯಲ್ಲಿ ನಿಬಂಧನೆಯನ್ನು ಸೇರಿಸಬಹುದು ಎಂದು ಆಯೋಗ ಹೇಳಿದೆ.

BDA ಮತ್ತು BMRDA, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಂದಿಗೆ ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.

ಆಯೋಗದ ಮೊದಲ ವರದಿಯನ್ನು ಹಲವು ಶಿಫಾರಸ್ಸುಗಳೊಂದಿಗೆ ಜುಲೈ 2021 ರಲ್ಲಿ ಕಂದಾಯ, ಸಾರಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಸಲ್ಲಿಸಲಾಗಿತ್ತು. ಈ ಬಾರಿ ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವರದಿ ಮತ್ತು ಶಿಫಾರಸ್ಸುಗಳನ್ನು ಸಲ್ಲಿಸಲಾಗಿದೆ.

ಪ್ರಮುಖ ಶಿಫಾರಸುಗಳು

• ರಾಜ್ಯ ಸರ್ಕಾರವು ಸೆಕ್ರೆಟರಿಯೇಟ್‌ನಲ್ಲಿ ಯಾವುದೇ ಕಡತವು (ಫೈಲ್) ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚಿರಬಾರದು ಎಂದು ನಿರ್ಧರಿಸಬಹುದು. ಸದ್ಯ ಐದರಿಂದ 10 ಹಂತಗಳಲ್ಲಿ ಕಡತಗಳು ಸಾಗುತ್ತಿವೆ.

• ರಾಜ್ಯ ನಾಗರಿಕ ಸೇವೆಗಳ ವಿತರಣೆಗಾಗಿ ಸರ್ಕಾರವು ಅಂಚೆ ಕಚೇರಿಗಳನ್ನು ಬಳಸಿಕೊಳ್ಳಬಹುದು.

• ಬಿಡಿಎ, ಕೆಎಚ್ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯಿತಿಗಳ ಮಿತಿಯಲ್ಲಿಯೂ ಮಂಜೂರು ಮಾಡಿದ ನಿವೇಶನಗಳಿಗೆ ಖಾತಾ ನೀಡುತ್ತಿವೆ. ಇದರೊಂದಿಗೆ ಅವು ಗ್ರಾಮ ಪಂಚಾಯಿತಿಗಳನ್ನು ಆಸ್ತಿ ತೆರಿಗೆಯಿಂದ ವಂಚಿತಗೊಳಿಸುತ್ತಿವೆ. ಚಾಯಿತಿಗಳು ಆಸ್ತಿ ತೆರಿಗೆ ಸಂಗ್ರಹಿಸಬೇಕು.

• ಬಿಬಿಎಂಪಿಯಲ್ಲಿ ವಲಯ ಆಯುಕ್ತರು ಮತ್ತು ನಗರ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬಹುದು.


ಇದನ್ನೂ ಓದಿ; ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

0
ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು,...