Homeಕರ್ನಾಟಕಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗ್ರಾಮದಲ್ಲಿ ಕಾರ್ಮಿಕರನ್ನು ಜೀತಕ್ಕಿಡಲಾಗಿದೆ ಎಂಬ ಮಾಹಿತಿ ಪಡೆದ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಪೊಲೀಸರು ಮತ್ತು ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಸ್ಪಂದನ ಅಸೋಸಿಯೇಷನ್‌ನ ಸದಸ್ಯರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣೆ ಮಾಡಿದೆ.

ರಕ್ಷಿಸಲ್ಪಟ್ಟ 34 ಜನರು ಒಂಬತ್ತು ಕುಟುಂಬಗಳಿಗೆ ಸೇರಿದವರು. ಒಡಿಶಾದ ಮಧ್ಯವರ್ತಿಯೊಬ್ಬರು ಪ್ರತಿ ಕುಟುಂಬಕ್ಕೆ 20,000 ರಿಂದ 30,000 ರೂ. ಮುಂಗಡ ಹಣದ ಭರವಸೆ ನೀಡುವ ಮೂಲಕ ಅವರನ್ನು ಕೆಲಸಕ್ಕೆ ಕರೆದುಕೊಂಡು ಬಂದಿದ್ದರು. ಮೊದಲು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೆಲಸ ಕೊಡಿಸುವುದಾಗಿ ಹೇಳಲಾಗಿತ್ತು. ಅಲ್ಲಿಗೆ ಬಸ್‌ ಮೂಲಕ ಕರೆದೊಯ್ಯಲಾಗಿತ್ತು. ವಿಜಯವಾಡದಿಂದ ರೈಲಿನ ಮೂಲಕ ಬಾಗಲಕೋಟೆಗೆ ಕರೆ ತರಲಾಗಿತ್ತು. ಈ ವಿಚಾರ ಕಾರ್ಮಿಕರಿಗೆ ಗೊತ್ತೇ ಇರಲಿಲ್ಲ. ಬಾಗಲಕೋಟೆಯಲ್ಲಿ ಕೆಲಸ ಪ್ರಾರಂಭಿಸಿ ಎರಡು ವಾರಗಳ ಬಳಿಕವಷ್ಟೇ ಸ್ಥಳೀಯರ ಮೂಲಕ ತಾವು ಕರ್ನಾಟಕದಲ್ಲಿದ್ದೇವೆ ಎಂಬ ವಿಷಯ ಕಾರ್ಮಿಕರಿಗೆ ಗೊತ್ತಾಗಿದೆ ಎಂದು ಸ್ಪಂದನ ಅಸೋಸಿಯೇಷನ್‌ನ ನಿರ್ದೇಶಕಿ ಸುಶೀಲಾ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಾರ್ಮಿಕರು ಒಮ್ಮೆ ಕೆಲಸಕ್ಕೆ ಹೋದರೆ 16 ಗಂಟೆಗೂ ಅಧಿಕ ಸಮಯ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 5 ಗಂಟೆಗೆ ಕೆಲಸ ಪ್ರಾರಂಭಿಸಿದರೆ, ರಾತ್ರಿ 9-10 ಗಂಟೆಯವರೆಗೆ ಕನಿಷ್ಠ ವಿರಾಮಗಳೊಂದಿಗೆ ದುಡಿಯುತ್ತಿದ್ದರು. ಕೆಲಸಕ್ಕೆ ಕರೆದುಕೊಂಡು ಬಂದ ಮಧ್ಯವರ್ತಿ 20,000 ರಿಂದ 30,000 ರೂ.ಗಳವರೆಗೆ ಹಣ ಭರವಸೆ ನೀಡಿದ್ದ, ಆದರೆ ಕುಟುಂಬಗಳಿಗೆ ಒಟ್ಟು 8,000 ರೂ.ಗಳು ಮಾತ್ರ ಸಿಕ್ಕಿತ್ತು. ಪ್ರತಿ ಕುಟುಂಬವು ವಾರಕ್ಕೆ ಸುಮಾರು 800 ರೂ.ಗಳನ್ನು ಗಳಿಸುತ್ತಿತ್ತು, ಅದರಿಂದ ಅವರು ದಿನಸಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. ಇಟ್ಟಿಗ ಗೂಡು ಮಾಲೀಕ ಪ್ರತಿ ಕುಟುಂಬದಿಂದ ಒಬ್ಬ ಸದಸ್ಯರಿಗೆ ವಾರಕ್ಕೊಮ್ಮೆ ಮಾರುಕಟ್ಟೆಗೆ ಭೇಟಿ ನೀಡಲು ಮಾತ್ರ ಅವಕಾಶ ನೀಡುತ್ತಿದ್ದರು. ಶೋಷಣೆಗೆ ಒಳಗಾದಾಗ ಕಾರ್ಮಿಕರು ಅವರಿಗೆ ಭರವಸೆ ನೀಡಿದ್ದ ವೇತನವನ್ನು ಎಂದಿಗೂ ಪಡೆದಿರಲಿಲ್ಲ ಎಂಬುವುದಾಗಿ ಸುಶೀಲಾ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕಾರ್ಮಿಕರು ನೀರು ಅಥವಾ ನೈರ್ಮಲ್ಯ ಸೌಲಭ್ಯಗಳಿಲ್ಲದೆ ಸಣ್ಣ ಇಟ್ಟಿಗೆ ಗುಡಿಸಲುಗಳಲ್ಲಿ ಅಥವಾ ತಾತ್ಕಾಲಿಕ ಟಾರ್ಪಲ್ ಶೆಡ್‌ಗಳಲ್ಲಿ ವಾಸಿಸುತ್ತಿದ್ದರು. ಅವರು ಕಟ್ಟಿಗೆ ಬಳಸಿ ಅಡುಗೆ ಮಾಡುತ್ತಿದ್ದರು. ಅವರು ಹೊರಗೆ ಹೋದಾಗಲೆಲ್ಲಾ ಗೂಡು ಮಾಲೀಕರು ಅವರನ್ನು ಗಮನಿಸುತ್ತಿದ್ದರು. ಗೂಡು ಮಾಲೀಕ ಮತ್ತು ಅವರ ಇಬ್ಬರು ಪುತ್ರರು ಕಾರ್ಮಿಕರ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದ್ದರು. ಮೌಖಿಕವಾಗಿ ನಿಂದಿಸುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದರೆ ಕಾರ್ಮಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು. 13 ರಿಂದ 16 ವರ್ಷದೊಳಗಿನ ಮಕ್ಕಳು ಕೂಡ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿ ವಿವರಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಮಾಹಿತಿ ಪಡೆದ ಸ್ಪಂದನ ಅಸೋಸಿಯೇಷನ್, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಆದರೆ, ದೂರು ದಾಖಲಿಸುವಾಗ ನಮಗೆ ಅಡೆತಡೆಗಳು ಎದುರಾಯಿತು. ಎಫ್‌ಐಆರ್ ದಾಖಲಿಸಲೂ ಕೂಡ ತುಂಬಾ ಸಮಸ್ಯೆ ಆಯಿತು. ನಮ್ಮ ತಂಡದ ಸದಸ್ಯರು ಮತ್ತು ಕಾರ್ಮಿಕರ ರಕ್ಷಣೆಗಾಗಿ ನಾವು ಎಸ್ಪಿಗೆ ಕರೆ ಮಾಡಿದೆವು. ನಂತರ ಅವರು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಜಕೀಯ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಪೊಲೀಸ್ ಠಾಣೆಗೆ ಬಂದು ಕಾರ್ಯಾಚರಣೆ ಮುಂದುವರಿಸದಂತೆ ಒತ್ತಡ ಹೇರಿದ ಪ್ರಸಂಗವೂ ನಡೆದಿದೆ ಎಂದು ಸುಶೀಲಾ ಹೇಳಿರುವುದಾಗಿ ವರದಿ ತಿಳಿಸಿದೆ.

ಎಫ್‌ಐಆರ್ ದಾಖಲಿಸಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಮಧ್ಯವರ್ತಿ ಅಥವಾ ಮಾಲೀಕರನ್ನು ಬಂಧಿಸಲಾಗಿದೆಯೇ ಎಂದು ಕೇಳಿದಾಗ, ಸುಶೀಲಾ, “ನನ್ನ ಪ್ರಕಾರ ಕನಿಷ್ಠ ಮಾಲೀಕರನ್ನೂ ಬಂಧಿಸಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಶಿಕ್ಷೆ ಎರಡು ವರ್ಷಗಳ ಜೈಲಾಗಿದೆ. ಆದ್ದರಿಂದ ಅವರನ್ನು ಬಂಧಿಸದೇ ಇರಬಹುದು. ಅನೇಕ ಸಂದರ್ಭಗಳಲ್ಲಿ ನಾವು ಇದನ್ನು ನೋಡಿದ್ದೇವೆ” ಎಂದು ಸುಶೀಲಾ ಹೇಳಿದ್ದಾರೆ.

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಗೂಡು ಮಾಲೀಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಅವರು ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಬಲಪಡಿಸಲು ಸ್ಪಂದನ ಸಂಸ್ಥೆ ಎಫ್‌ಐಆರ್‌ಗೆ ಮಾನವ ಕಳ್ಳಸಾಗಣೆ ಆರೋಪಗಳನ್ನು ಸೇರಿಸಲು ಒತ್ತಾಯಿಸಲು ಯೋಜಿಸುತ್ತಿದೆ ಎಂದು ಸುಶೀಲಾ ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಬಾಲ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಕಾಯ್ದೆ, 1976 ರ ಸೆಕ್ಷನ್ 16, 17 ಮತ್ತು 18 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಿಲ್ಲಾಡಳಿತವು ಎಲ್ಲಾ 34 ಕಾರ್ಮಿಕರಿಗೆ ಬಿಡುಗಡೆ ಪ್ರಮಾಣಪತ್ರಗಳನ್ನು ನೀಡಿದೆ ಮತ್ತು ಪ್ರತಿ ವ್ಯಕ್ತಿಗೆ 30,000 ರೂ.ಗಳ ತಕ್ಷಣದ ಪರಿಹಾರದ ವ್ಯವಸ್ಥೆ ಮಾಡಿದೆ. ಅಧಿಕಾರಿಗಳು ಮೊದಲು ಕಾರ್ಮಿಕರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ಇರಿಸಿದ್ದರು. ನಂತರ ಕಾರ್ಮಿಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡದ ಮೂಲಕ ಒಡಿಶಾದ ಅವರ ಹಳ್ಳಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಇದರೊಂದಿಗೆ, ಡಿಸೆಂಬರ್ 2025 ರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಇಟ್ಟಿಗೆ ಗೂಡುಗಳು ಮತ್ತು ಒಂದು ಕಬ್ಬಿನ ತೋಟದಿಂದ ಒಟ್ಟು 99 ಜನರನ್ನು ಜೀತಪದ್ಧತಿಯಿಂದ ಅಧಿಕಾರಿಗಳು ಮುಕ್ತಗೊಳಿಸಿದಂತೆ ಆಗಿದೆ.

ಬಾಗಲಕೋಟೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುವುದಕ್ಕೆ ಇಟ್ಟಿಗೆ ಗೂಡುಗಳು ಮತ್ತು ಕಬ್ಬು ಕಟಾವುಗಳಲ್ಲಿ ಕಾರ್ಮಿಕರ ಬೇಡಿಕೆಯೇ ಕಾರಣ ಎಂದು ಸುಶೀಲಾ ಹೇಳಿದ್ದಾರೆ. ಕಾನೂನು ಸರಿಯಾಗಿ ಅನುಷ್ಠಾನ ಆಗದಿರುವುದನ್ನು ಅವರು ಎತ್ತಿ ತೋರಿಸಿದ್ದಾರೆ.

Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...