Homeಮುಖಪುಟ20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ

ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ಎಐಎಂಒ ಮಾಜಿ ಅಧ್ಯಕ್ಷ ರಘುನಾಥನ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಎರಡು ತಿಂಗಳ ಲಾಕ್‌ಡೌನ್‌‌ ಮಧ್ಯೆ 35% ನಷ್ಟು ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮ ಗಳು (ಎಂಎಸ್‌ಎಂಇ) ಹಾಗೂ 37% ಸ್ವಯಂ ಉದ್ಯೋಗಗಳು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ಅಖಿಲ ಭಾರತ ತಯಾರಕರ ಸಂಘ (ಎಐಎಂಒ) ಸಮೀಕ್ಷೆ ತಿಳಿಸಿದೆ.

ಮೇ 24 ಮತ್ತು ಮೇ 30 ರ ನಡುವೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು 46,425 ಸ್ವಉದ್ಯೋಗಿಗಳು, ಎಂಎಸ್‌ಎಂಇ ಮಾಲೀಕರು, ಕಾರ್ಪೊರೇಟ್ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಭಾಗವಹಿಸಿದ್ದರು. ವಿಶೇಷವೆಂದರೆ, ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ್’ ಪ್ಯಾಕೇಜ್ ಎಂಬ 20 ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜ್ ಘೋಷಿಸಿದ ನಂತರ ಈ ಸಮೀಕ್ಷೆಯನ್ನು ನಡೆಸಲಾಗಿದೆ.

“ವ್ಯವಹಾರವನ್ನು ಮುಂದುವರೆಸುವ ಅನಿಶ್ಚಿತತೆಯು ಎಂಎಸ್ಎಂಇ ವಿಭಾಗದಲ್ಲಿ ಸುಮಾರು 11% ಇದ್ದರೆ ಸ್ವಯಂ ಉದ್ಯೋಗ ವಿಭಾಗದಲ್ಲಿ ಸುಮಾರು 17% ಆಗಿದೆ. ಅವರು ಇನ್ನೂ ಚೇತರಿಸಿಕೊಳ್ಳಲು ಅವಕಾಶವಿದೆ” ಎಂದು ಸಮೀಕ್ಷೆ ತಿಳಿಸಿದೆ.

ಮೇ 13 ರಂದು ಹಣಕಾಸು ಪ್ಯಾಕೇಜ್ ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಮರು ವರ್ಗೀಕರಿಸಲು ಎಂಎಸ್‌ಎಂಇಗಳ ವ್ಯಾಖ್ಯಾನವನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದರು. ಪ್ಯಾಕೇಜ್ ಅಡಿಯಲ್ಲಿ ಸುಮಾರು 3.5 ಲಕ್ಷ ಕೋಟಿ ರೂ.ಗಳನ್ನು ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವಾಗಿ ಎಂಎಸ್‌ಎಂಇ ವಲಯಕ್ಕೆ ವಿಸ್ತರಿಸಲಾಯಿತು.

ಸಮೀಕ್ಷೆಯ ಇತರ ಸಂಶೋಧನೆಗಳ ಪೈಕಿ, 32% ಎಂಎಸ್‌ಎಂಇಗಳು ಮತ್ತು 26% ಕಾರ್ಪೊರೇಟ್‌ಗಳು ಕೊರೊನಾ ಪ್ರಭಾವದಿಂದ ಚೇತರಿಸಿಕೊಳ್ಳಲು ಆರು ತಿಂಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, 46% ಕಾರ್ಪೊರೇಟ್‌ಗಳು ಮತ್ತು 27% ಸ್ವಯಂ ಉದ್ಯೋಗಿಗಳು ಮೂರು ತಿಂಗಳೊಳಗೆ ಚೇತರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳು: 

“ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯಿಸಿದವರಲ್ಲಿ, ಕೊರೊನಾದಿಂದಾಗಿ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದು ಸೂಚಿಸಿದ 46% ಜನರು, ಇದರಿಂದ ಚೇತರಿಸಿಕೊಳ್ಳಲು ಮೂರು ತಿಂಗಳುಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 26% ಜನರು ಆರು ತಿಂಗಳ ಅವಧಿಯಲ್ಲಿ ವರ್ಷದ ಅಂತ್ಯದ ವೇಳೆಗೆ ಸರಿಯಾಗುತ್ತದೆ ಎಂದು ಭಾವಿಸಿದ್ದಾರೆ. ಈ ವಲಯವು ಭಾರಿ ಮುಚ್ಚುವಿಕೆಗಳನ್ನು ನೋಡುವುದಿಲ್ಲವಾದರೂ,  ಅನೇಕ ಜನರು ಉದ್ಯೋಗ ಕಳೆದುಕೊಳ್ಳುವುದು, ಕೆಲಸದ ಪ್ರಮಾಣವನ್ನು ಕಡಿಮೆ ಮಾಡುವುದು ಇತ್ಯಾದಿ ಆಗುತ್ತದೆ” ಎಂದು ಎಐಎಂಒ ಗೌರವ ಪ್ರಧಾನ ಕಾರ್ಯದರ್ಶಿ ಕೆನ್ನಿ ರಾಮಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಎಸ್‌ಎಂಇ ವಲಯವು ಕೃಷಿಯ ನಂತರ ದೇಶದ ಅತಿದೊಡ್ಡ ಉದ್ಯೋಗ ಸೃಷ್ಟಿಸುವ ವಲಯವಾಗಿದೆ.

ಅಗತ್ಯ ಸೇವಾ ಪೂರೈಕೆದಾರರ ವ್ಯವಹಾರಗಳಲ್ಲಿ, ಕೊರೊನಾದಿಂದ ಯಾವುದೇ ಪರಿಣಾಮ ಬೀಳಲಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಸಂಗ್ರಹಿಸಿದ ದತ್ತಾಂಶಗಳ ಬಗ್ಗೆ ಎಐಎಂಒ ಹೆಚ್ಚಿನ ಫಲಿತಾಂಶಗಳನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಎಐಎಂಒ ಮಾಜಿ ಅಧ್ಯಕ್ಷ ಕೆ ಇ ರಘುನಾಥನ್ ತಿಳಿಸಿದ್ದಾರೆಂದು ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಎಐಎಂಒ ಭಾರತದಲ್ಲಿನ ಎಂಎಸ್‌ಎಂಇಗಳ ಹೃದಯ ಬಡಿತವನ್ನು ತೋರಿಸುತ್ತಿದೆ. ಎಂಎಸ್‌ಎಂಇಗಳ ಅಗತ್ಯಗಳನ್ನು ಬೆಳಕಿಗೆ ತಂದಿದ್ದಕ್ಕಾಗಿ ನಾವು ಹಣಕಾಸು ಸಚಿವೆ ಮತ್ತು ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತೇವೆ.  ಭಾರತದಾದ್ಯಂತದ ವಿವಿಧ ಎಂಎಸ್‌ಎಂಇ ಸಂಘಗಳ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿದ್ದೇವೆ. ಸರ್ಕಾರ ಘೋಷಿಸಿದ ಹಣಕಾಸು ಪ್ಯಾಕೇಜ್‌ಗಳ ಪ್ರಯೋಜನಗಳು ಇನ್ನು ಎಂಎಸ್‌ಎಂಇಗಳ ಬಾಗಿಲನ್ನು ತಲುಪಿಲ್ಲ” ಎಂದು ರಘುನಾಥನ್ ಹೇಳಿದ್ದಾರೆ.

ಈ ಸಮೀಕ್ಷೆಯು ಇದುವರೆಗಿನ ಅತಿದೊಡ್ಡ ಉದ್ಯಮ ಸಮೀಕ್ಷೆಯಾಗಿದೆ ಎಂದು ಎಐಎಂಒ ಹೇಳಿದೆ. ಸಾಮಾಜಿಕ ತಂತ್ರಜ್ಞಾನ ಉದ್ಯಮ ಮತ್ತು ಫೆಡರೇಶನ್ ಆಫ್ ಇಂಡಿಯಾ ಇಂಡಸ್ಟ್ರಿ, ಡಿಜಿಟಲ್ ಫಾರ್ ಎಂಪವರ್‌ಮೆಂಟ್ (ಡಿ 4 ಇ), ಅಸೋಸಿಯೇಷನ್ ​​ಆಫ್ ಇಂಡಿಯನ್ ಇಂಡಸ್ಟ್ರಿ, ಸಿಮೆಂಟ್ ತಯಾರಕರ ಕಲ್ಯಾಣ ಸಂಘ, ಭಾರತೀಯ ಮಹಿಳಾ ಉದ್ಯಮಿಗಳ ಒಕ್ಕೂಟ, ಭಾರತೀಯ ಮಹಿಳಾ ಉದ್ಯಮಿಗಳ ಫಡರೇಶನ್, ಫಸ್ಟ್ ವಲ್ಡ್ ಕಮ್ಯೂನಿಟಿ, ಚೇಂಬರ್ ಆಫ್ ಸ್ಮಾಲ್ ಇಂಡಸ್ಟ್ರಿ ಅಸೋಸಿಯೇಷನ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟ ಮತ್ತು ಲಕ್ನೋದ ಅಮೌಸಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂದತೆ ಮುಂತಾದ ಸಂಘಟನೆಗಳ ಸಹಯೋಗದೊಂದಿಗೆ ಈ ಸಮೀಕ್ಷೆಯು ನಡೆದಿತ್ತು.


ಓದಿ: ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...