Homeಮುಖಪುಟಜಮ್ಮು&ಕಾಶ್ಮೀರ: ಬಸ್ ಕಣಿವೆಗೆ ಬಿದ್ದು 36 ಜನ ಸಾವು

ಜಮ್ಮು&ಕಾಶ್ಮೀರ: ಬಸ್ ಕಣಿವೆಗೆ ಬಿದ್ದು 36 ಜನ ಸಾವು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರ ಪೊಲೀಸರು ಬುಧವಾರ ತಿಳಿಸಿದ್ದಾರೆ.

”ದೋಡಾದ ಅಸ್ಸಾರ್ ಪ್ರದೇಶದಲ್ಲಿ ಬಸ್ ಕಣಿವೆಗೆ ಉರುಳಿಬಿದ್ದಿದ್ದು, 5 ಜನರು ಸಾವನ್ನಪ್ಪಿದ್ದಾರೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು, ”ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ದುರಂತದಲ್ಲಿ 36 ಜನರು ಸಾವನ್ನಪ್ಪಿದ್ದಾರೆ.. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಕಿಸ್ತ್ವಾರ್ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ದೋಡಾಕ್ಕೆ ಸ್ಥಳಾಂತರಿಸಲಾಗುತ್ತಿದೆ” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಫ್ತಿ, ”ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ತೀವ್ರ ಆಘಾತ ಮತ್ತು ದುಃಖವಾಗಿದೆ. ಸತ್ತವರ ಕುಟುಂಬಗಳಿಗೆ ಸಂತಾಪಗಳು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುತ್ತದೆ ಎಂದು ಭಾವಿಸುತ್ತೇವೆ” ಎಂದು ಬರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ತುಂಬಾ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಿರ್ದೇಶಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರು ಜೆ & ಕೆ ನ ದೋಡಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ”ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ದುರಂತದಿಂದ ಸಾವುಗಳು ಸಂಭವಿಸಿದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಬಸ್ ಅಪಘಾತಕ್ಕೀಡಾದ ಕಂದರದಲ್ಲಿ ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...