Homeಕರೋನಾ ತಲ್ಲಣದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,571 ಕೊರೊನಾ ಪ್ರಕರಣಗಳು ಪತ್ತೆ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,571 ಕೊರೊನಾ ಪ್ರಕರಣಗಳು ಪತ್ತೆ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 36,571 ಹೊಸ ಕೊರೊನಾ ವೈರಸ್ ಪ್ರಕರಣಗಳು ಮತ್ತು 540 ಸಾವುಗಳು ವರದಿಯಗಿವೆ. ಇದರಿಂದ ದೇಶದ ಒಟ್ಟಾರೆ ಪ್ರಕರಣಗಳು 3.23 ಕೋಟಿಯಷ್ಟಿದ್ದು, ಒಟ್ಟು ಸಾವುಗಳು 4.33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇರಳದಲ್ಲಿ ಒಂದೇ ದಿನ 21,116 ಪ್ರಕರಣಗಳು ದಾಖಲಾಗಿದ್ದು, ದೇಶದ  ಒಟ್ಟು ಕೇಸ್‌ಗಳಲ್ಲಿ ಶೇಕಡಾ 50 ರಷ್ಟು ಹೊಸ ಪ್ರಕರಣಗಳು ಕೇರಳದಿಂದ ವರದಿಯಾಗುತ್ತಿವೆ. ಕೇರಳದಲ್ಲಿ ಶೇಕಡಾ 13.97  ರಷ್ಟು ಪಾಸಿಟಿವಿಟಿ ರೇಟ್ ಇದೆ.

ಕೊರೊನಾದಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಈಡಾಗಿರುವ ಮಹಾರಾಷ್ಟ್ರವು 24 ಗಂಟೆಗಳಲ್ಲಿ 5,225 ಹೊಸ ಸೋಂಕುಗಳು ಮತ್ತು 154 ಸಾವುಗಳನ್ನು ವರದಿ ಮಾಡಿದೆ. ಪುಣೆ ಸೇರಿದಂತೆ ಕೇವಲ ಏಳು ಜಿಲ್ಲೆಗಳು ಮಹಾರಾಷ್ಟ್ರದಲ್ಲಿ ಹೆಚ್ಚಿನ ಸೋಂಕು ಪ್ರಕರಣ ವರದಿಯಾಗಲು ಕಾರಣವಾಗಿವೆ ಎಂದು ರಾಜ್ಯ ಸರ್ಕಾರದ ತಿಳಿಸಿದೆ.

ಇದನ್ನೂ ಓದಿ: ದೇಶದಲ್ಲಿ 5 ತಿಂಗಳ ಬಳಿಕ ಅತಿ ಕಡಿಮೆ ಕೊರೊನಾ ಪ್ರಕರಣ ದಾಖಲು

ದೆಹಲಿಯಲ್ಲಿ ಗುರುವಾರ 25 ಹೊಸ ಪ್ರಕರಣಗಳು ಮತ್ತು ಎರಡು ವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ. ರಾಷ್ಟ್ರೀಯ ರಾಜಧಾನಿಯಲ್ಲಿನ ಪಾಸಿಟಿವಿಟಿ ದರವು ಶೇಕಡಾ 0.04 ಕ್ಕೆ ಇಳಿದಿದೆ ಎಂದು ನಗರದ ಆರೋಗ್ಯ ಇಲಾಖೆಯು ಮಾಹಿತಿ ಹಂಚಿಕೊಂಡಿದೆ.

ಒಟ್ಟಾರೆಯಾಗಿ, ಕಳೆದ 25 ದಿನಗಳಲ್ಲಿ ದೇಶದಲ್ಲಿ ದೈನಂದಿನ ಪಾಸಿಟಿವಿಟಿ ದರವು ಶೇಕಡಾ 3 ಕ್ಕಿಂತ ಕಡಿಮೆಯಿತ್ತು. ಆದರೆ, ಈಗ ಶೇಕಡಾ 1.94 ರಷ್ಟಿದೆ.

ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕವೂ ದೇಶಾದ್ಯಂತ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅದರಲ್ಲಿ ಶೇಕಡಾ 46 ರಷ್ಟು ಪ್ರಕರಣಗಳು ಕೇರಳದಿಂದ ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕೇರಳದಲ್ಲಿ ಲಸಿಕೆಯ ಮೊದಲ ಡೋಸ್ ಪಡೆದ 80,000 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಎರಡನೇ ಡೋಸ್ ಪಡೆದಿರುವ 40,000 ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.


ಇದನ್ನೂ ಓದಿ:  ದೇಶದಲ್ಲಿ 2 ಡೋಸ್ ಲಸಿಕೆ ಪಡೆದ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...