Homeಅಂತರಾಷ್ಟ್ರೀಯಸುಡಾನ್: ಚಿನ್ನದ ಗಣಿ ಕುಸಿದು 38 ಮಂದಿ ಸಾವು

ಸುಡಾನ್: ಚಿನ್ನದ ಗಣಿ ಕುಸಿದು 38 ಮಂದಿ ಸಾವು

- Advertisement -
- Advertisement -

ಸುಡಾನ್​​ನ ಪಶ್ಚಿಮ ಕೊರ್ಡೋಫಾನ್ ಪ್ರಾಂತ್ಯದಲ್ಲಿ ಮಂಗಳವಾರ ಚಿನ್ನದ ಗಣಿ ಕುಸಿದು ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಎಂದು ಸುಡಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ದೇಶದ ಸರ್ಕಾರಿ ಸ್ವಾಮ್ಯದ ಗಣಿಗಾರಿಕೆ ಕಂಪನಿಯು ಹೇಳಿಕೆ ನೀಡಿದ್ದು, ಸುಡಾನ್ ರಾಜಧಾನಿ ಖಾರ್ಟೌಮ್‌ನ ದಕ್ಷಿಣಕ್ಕೆ 700 ಕಿಲೋಮೀಟರ್ (435 ಮೈಲುಗಳು) ದೂರದಲ್ಲಿರು ಫುಜಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಈ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ಇದನ್ನು ಮುಚ್ಚಲಾಗಿತ್ತು ಎಂದು ತಿಳಿಸಿದೆ.

’ಇಲ್ಲಿ ಕಾರ್ಯಾಚರಣೆ ನಿಲ್ಲಿಸಲು ಸರ್ಕಾರ ನಿರ್ಧರಿಸಿತ್ತು. ಕೆಲಸ ನಿಲ್ಲಿಸುವಂತೆಯೂ ಸೂಚಿಸಿದ್ದೆವು. ಜೊತೆಗೆ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಿದ್ದೆವು. ಆದರೆ ಗಣಿಗಾರಿಕೆ ನಡೆಸುವವರು, ಕೆಲಸಗಾರರು ಮತ್ತೆ ಗಣಿಗಾರಿಕೆ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ಘಟನೆಯಲ್ಲಿ 25 ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಗಣಿಗಾರಿಕೆ ಕಂಪನಿಯು ತಿಳಿಸಿದೆ.

ಮೃತರ ಅಂತ್ಯಕ್ರಿಯೆ ಮಾಡಲು ಜನರು ಸಮಾಧಿಗಳನ್ನು ಸಿದ್ಧಪಡಿಸುತ್ತಿರುವುದನ್ನು ಕಂಪನಿ ತಮ್ಮ ಖಾತೆಯಲ್ಲಿ ಹಂಚಿಕೊಂಡಿದೆ.

ಸುಡಾನ್​​ನಲ್ಲಿ ಗಣಿಗಾರಿಕೆ ಅತ್ಯಂತ ಮುಖ್ಯ ಕಸುಬಾಗಿದೆ. ರೆಡ್​ ಸೀ, ನಹ್ರ್​ ಅಲ್​ ನೀಲ್, ಪಶ್ಚಿಮ ಕೊರ್ಡೋಫಾನ್, ದಕ್ಷಿಣ ಕೊರ್ಡೊಫಾನ್, ಪಶ್ಚಿಮ ಕೊರ್ಡೊಫಾನ್​ ಮತ್ತು ಉತ್ತರದ ರಾಜ್ಯಗಳು ಸೇರಿ ಬಹುತೇಕ ರಾಜ್ಯಗಳಿಂದ ಸುಮಾರು 20 ಲಕ್ಷ ​ ಜನ ಗಣಿಗಾರಿಕೆ ಉದ್ಯಮದಲ್ಲಿ ದುಡಿಯುತ್ತಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...