ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕಾತಿ ಅಧಿಸೂಚನೆ ರದ್ದು

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ. ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣವನ್ನು ಶೇಕಡ 50ರಿಂದ 56ಕ್ಕೆ ಹೆಚ್ಚಳ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದನ್ವಯ ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ ಚನ್ನಪಟ್ಟಣದ ಎಂ.ಟೆಕ್ ಪದವೀಧರ ಬಿ.ಎನ್‌ ಮಧು ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಕೆಎಸ್‌ಎಟಿ ಅಧ್ಯಕ್ಷ ಆರ್‌.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್ಕರ್ … Continue reading ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕಾತಿ ಅಧಿಸೂಚನೆ ರದ್ದು