HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...