Homeಕರ್ನಾಟಕ3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

- Advertisement -
- Advertisement -

ದೇಶದ ರಾಜಧಾನಿ ದೆಹಲಿಯು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2021ರ ವರದಿ ಬಹಿರಂಗಪಡಿಸಿದೆ. ರಾಜ್ಯದ ರಾಜಧಾನಿ ಬೆಂಗಳೂರು ಈ ಪಟ್ಟಿಯ ಮೂರನೇ ಸ್ಥಾನದಲ್ಲಿದೆ. ದೆಹಲಿಯಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಲಾಗಿದೆ. ನಗರದಲ್ಲಿ ಒಟ್ಟು 390 ಪೊಕ್ಸೊ ಪ್ರಕರಣ ದಾಖಲಾಗಿದ್ದು 393 ಮಕ್ಕಳು ಸಂತ್ರಸ್ತರಾಗಿದ್ದಾರೆ. ಅದರಲ್ಲೂ 312 ಮಕ್ಕಳ ಮೇಲೆ ರೇಪ್ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020 ಕ್ಕೆ ಹೋಲಿಸಿದರೆ 40% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. 2020 ರಲ್ಲಿ 9,782 ಪ್ರಕರಣ ದಾಖಲಾಗಿತ್ತು ಎಂದು ಅಂಕಿಅಂಶಗಳು ತೋರಿಸಿವೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಪ್ರಕರಣಗಳು ಎಲ್ಲಾ 19 ಮಹಾನಗರಗಳ ವಿಭಾಗದಲ್ಲಿ ಒಟ್ಟು ಅಪರಾಧಗಳ 32.20% ರಷ್ಟಿದೆ. ದೆಹಲಿಯ ನಂತರ ಆರ್ಥಿಕ ರಾಜಧಾನಿ ಮುಂಬೈ 5,543 ಪ್ರಕರಣಗಳು ದಾಖಲಾಗಿದ್ದು ಮತ್ತು ಬೆಂಗಳೂರು 3,127 ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂಓದಿ: ಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

2020 ರಲ್ಲಿ ಮಹಿಳೆಯರ ವಿರುದ್ಧ ಬೆಂಗಳೂರಿನಲ್ಲಿ 2730 ಪ್ರಕರಣ ದಾಖಲಾದರೆ, 2021 ರಲ್ಲಿ 3127 ಪ್ರಕರಣಗಳು ದಾಖಲಾಗಿದೆ. 2021 ರಲ್ಲಿ 3 ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಗಳು ದಾಖಲಾಗಿದ್ದರೆ, 26 ಮಹಿಳೆಯರು ವರದಕ್ಷಿಣೆ ವಿಚಾರದಲ್ಲಿ ಹತ್ಯೆಯಾಗಿದ್ದಾರೆ. ಒಬ್ಬ ಮಹಿಳೆಯ ಮೇಲೆ ಆಸಿಡ್‌ ದಾಳಿ ನಡೆದಿದ್ದು, 431 ಮಹಿಳೆಯರು ಗಂಡ ಅಥವಾ ಅವನ ಸಂಬಂಧಿಗಳಿಂದ ಕ್ರೌರ್ಯ ಅನುಭವಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 590 ಮಹಿಳೆಯರ ಕಿಡ್ನಾಪ್‌ ಮಾಡಿರುವ ಘಟನೆ ನಡೆದಿದೆ. ಒಟ್ಟು 117 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2021 ರಲ್ಲಿ ನಗರದಲ್ಲಿ ಒಟ್ಟು 597 ಮಹಿಳೆಯ ಮೇಲೆ ದಾಳಿ ಮತ್ತು ಘನತೆಯನ್ನು ಕುಗ್ಗಿಸಿರುವ ಪ್ರಕರಣ ದಾಖಲಾಗಿದೆ. ಒಟ್ಟು 739 ವರದಕ್ಷಿಣೆ ನಿಷೇಧ ಕಾಯಿದೆ-1961 ರ ಪ್ರಕಾರ ಕಿರುಕುಳ ಅನುಭವಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಲಾಗಿದೆ. ನಗರದಲ್ಲಿ ಒಟ್ಟು 390 ಪೊಕ್ಸೊ ಪ್ರಕರಣ ದಾಖಲಾಗಿದ್ದು 393 ಮಕ್ಕಳು ಸಂತ್ರಸ್ತರಾಗಿದ್ದಾರೆ. ಅದರಲ್ಲೂ 312 ಮಕ್ಕಳ ಮೇಲೆ ರೇಪ್ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ದೇಶದ 19 ಮೆಟ್ರೋಪಾಲಿಟನ್‌ ನಗರಗಳಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಲ್ಲಿ ಮುಂಬೈ ಮತ್ತು ಬೆಂಗಳೂರು ಕ್ರಮವಾಗಿ 12.76% ಮತ್ತು 7.2% ಒಟ್ಟು ಪಾಲನ್ನು ಹೊಂದಿವೆ.

ಎರಡು ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಇತರ ಮೆಟ್ರೋಪಾಲಿಟನ್ ನಗರಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 3948 ಅಪಹರಣ ನಡೆದಿದ್ದು, 4674 ಗಂಡನಿಂದ ಕ್ರೌರ್ಯ ಮತ್ತು 833 ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಮಹಿಳೆಯರ ವಿರುದ್ಧದ ಅತಿ ಹೆಚ್ಚು ಅಪರಾಧಗಳ ಪ್ರಕರಣಗಳನ್ನು ವರದಿಯಾಗಿದೆ.

2021 ರಲ್ಲಿ ದೆಹಲಿಯಲ್ಲಿ ಸರಾಸರಿಯಾಗಿ ಪ್ರತಿದಿನ ಎರಡು ಹುಡುಗಿಯರ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಅಂಕಿ ಅಂಶ ಹೇಳಿದೆ. ದೆಹಲಿಯಲ್ಲಿ ಮಹಿಳೆಯರ ವಿರುದ್ಧ 13,982 ಅಪರಾಧ ಪ್ರಕರಣಗಳನ್ನು ದಾಖಲಾದರೆ, ಎಲ್ಲಾ 19 ಮಹಾನಗರಗಳಲ್ಲಿ ಒಟ್ಟು ಅಪರಾಧಗಳು 43,414 ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಬೆಂಗಳೂರು ಮೆಟ್ರೋಪಾಲಿಟನ್ ನಗರಗಳಲ್ಲಿ ಮೂರನೇ ಸ್ಥಾನದಲ್ಲಿ ಇರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...