Homeಕರ್ನಾಟಕಐಟಿ ದಾಳಿ ವೇಳೆ ಪರಮೇಶ್ವರ್‌ ಸಂಸ್ಥೆಗಳಲ್ಲಿ ಸಿಕ್ತು 4.25 ಕೋಟಿ ರೂ ನಗದು

ಐಟಿ ದಾಳಿ ವೇಳೆ ಪರಮೇಶ್ವರ್‌ ಸಂಸ್ಥೆಗಳಲ್ಲಿ ಸಿಕ್ತು 4.25 ಕೋಟಿ ರೂ ನಗದು

- Advertisement -
- Advertisement -

ಕರ್ನಾಟಕದ ಕಾಂಗ್ರೆಸ್ ನಾಯಕ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ರವರ ಮನೆಯಲ್ಲಿ 4.25 ಕೋಟಿ  ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.

ಜಿ. ಪರಮೇಶ್ವರ ಮತ್ತು ಅವರ ಸಹಚರರಿಗೆ ಸಂಬಂಧಿಸಿರುವ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದ ನಂತರ ಆದಾಯ ತೆರಿಗೆ ಅಧಿಕಾರಿಗಳು 4 ಕೋಟಿಗೂ ಹೆಚ್ಚು ಹಣವನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದ ಬಹು ಕೋಟಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿ. ಪರಮೇಶ್ವರರವರೊಂದಿಗೆ ಬೆಂಗಳೂರು ಮತ್ತು ತುಮಕುರುಗಳಲ್ಲಿ ಸಂಪರ್ಕ ಹೊಂದಿದ ಸುಮಾರು 30 ಸ್ಥಳಗಳನ್ನು ಹುಡುಕಲಾಗಿದ್ದು ಇಂದು ಮುಂಜಾನೆಯಿಂದಲೇ ತೆರಿಗೆ ಇಲಾಖೆಯು ಶೋಧ ಕಾರ್ಯ ಮುಂದುವರೆಸುತ್ತಿದೆ.

ಪರಮೇಶ್ವರ್‌ ಅವರ ಸಹೋದರನ ಪುತ್ರ ಆನಂದ್ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮನೆಯನ್ನು ಇಂದು ತೆರಿಗೆ ಇಲಾಖೆ ಹುಡುಕುತ್ತಿದೆ. ಈ ಕಾಲೇಜನ್ನು ಪರಮೇಶ್ವರ ಸಂಬಂಧಿಸಿದ ಟ್ರಸ್ಟ್ ನಡೆಸುತ್ತಿದೆ.

ಸಂಘಟಿತ ದಾಳಿಗಳಲ್ಲಿ, 300 ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು ಕರ್ನಾಟಕದ ಇಬ್ಬರು ಪ್ರಮುಖ ಕಾಂಗ್ರೆಸ್ ಮುಖಂಡರಾದ ಜಿ. ಪರಮೇಶ್ವರ್‌ ಮತ್ತು ಮಾಜಿ ಸಂಸದ ಆರ್.ಎಲ್.ಜಾಲಪ್ಪ ಅವರ ಪುತ್ರ ಜೆ.ರಾಜೇಂದ್ರ ಅವರ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

ಪರಮೇಶ್ವರ ಅವರ ಕುಟುಂಬವು 58 ವರ್ಷಗಳ ಹಿಂದೆ ಅವರ ತಂದೆ ಎಚ್.ಎಂ.ಗಂಗಾಧರಯ ಅವರು ಸ್ಥಾಪಿಸಿದ ಸಿದ್ಧಾರ್ಥ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಅನ್ನು ನಡೆಸುತ್ತಿದ್ದರೆ, ರಾಜೇಂದ್ರ ಅವರು ದೊಡ್ಡಬಳ್ಳಾಪುರ ಮತ್ತು ಕೋಲಾರದಲ್ಲಿ ಆರ್.ಎಲ್. ಜಾಲಪ್ಪ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯನ್ನು ನಡೆಸುತ್ತಿದ್ದಾರೆ.

“ದಾಳಿಯ ಬಗ್ಗೆ ನನಗೆ ತಿಳಿದಿಲ್ಲ. ಅವರು ಅದನ್ನು ಎಲ್ಲಿ ಮಾಡುತ್ತಿದ್ದಾರೆಂದು ನನಗೆ ಗೊತ್ತಿಲ್ಲ. ಅವರು ಹುಡುಕಲು ಅವಕಾಶ ಮಾಡಿಕೊಡಿ, ನನಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಡೆಯಿಂದ ಏನಾದರೂ ದೋಷವಿದ್ದರೆ ಅದನ್ನು ಸರಿಪಡಿಸುತ್ತೇವೆ” ಎಂದು ಜಿ. ಪರಮೇಶ್ವರ್‌ರವರು ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...