Homeಮುಖಪುಟಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

- Advertisement -
- Advertisement -

ಮಣಿಪುರದಲ್ಲಿ ಮೈತಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳನ್ನು ಜುಲೈ ತಿಂಗಳಲ್ಲಿ ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ರವಿವಾರ ಬಂಧಿಸಿದ್ದಾರೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಬಂಧಿತ ಆರೋಪಿಗಳೆಂದು ಸಿಬಿಐ ತಿಳಿಸಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರು ವಿದ್ಯಾರ್ಥಿನಿಯರನ್ನು ಇಂಫಾಲದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆಯೆಂದು ತಿಳಿದುಬಂದಿದೆ.

ಇಂದು ಬಂಧಿತರಾದ ನಾಲ್ವರು ಆರೋಪಿಗಳನ್ನು ಪಾವೊ ಮಿನಿಲುಮ್ ಹಾವೊಕಿಪ್, ಮಾಲ್ಸಾವುನ್ ಹಾವೊಕಿಪ್, ಲ್ಹಿಂಗ್ನೆಚೊಂಗ್ ಬೈಟೆ ಹಾಗೂ ಟಿನ್ನೈಖೋಲ್ ಎಂದು ಗುರುತಿಸಲಾಗಿದ್ದು, ಅವರನ್ನು ಅಸ್ಸಾಂನ ಗುವಾಹಟಿಗೆ ಕೊಂಡೊಯ್ಯಲಾಗಿದೆ. ಬಂಧಿತ ಆರೋಪಿ ಲ್ಹಿಂಗ್ನೆಚೊಂಗ್ ಬೈಟೆ, ಕೊಲೆಯಾದ ವಿದ್ಯಾರ್ಥಿನಿಯ ಗೆಳತಿಯೆಂದು ತಿಳಿದುಬಂದಿದೆ.

ಜುಲೈನಲ್ಲಿ ನಾಪತ್ತೆಯಾದ ಓರ್ವ ವಿದ್ಯಾರ್ಥಿನಿ ಹಾಗೂ ಇನ್ನೋರ್ವ ವಿದ್ಯಾರ್ಥಿಯ ಮೃತದೇಹಗಳ ಭಾವಚಿತ್ರ ಸೆ.26ರಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಬಳಿಕ ಮಣಿಪುರ ಸರಕಾರ ತಕ್ಷಣವೇ ಕಾರ್ಯಪ್ರವೃತ್ತವಾಗಿ ಹಂತಕರ ಪತ್ತೆ ಕಾರ್ಯಾಚರಣೆ ಆರಂಭಿಸಿತ್ತು.

ಪೊಲೀಸರು ಹಾಗೂ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ನಾಲ್ವರು ಶಂಕಿತ ಆರೋಪಿಗಳನ್ನು ಚುರಾಚಂದ್ಪುರ ಗುಡ್ಡಗಾಡು ಜಿಲ್ಲೆಯಿಂದ ಬಂಧಿಸಲಾಗಿತ್ತು. ಮೇ 3ರಂದು ಭೀಕರ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದ ಈ ಜಿಲ್ಲೆಯಲ್ಲಿ ಹಲವಾರು ಕುಕಿ ಉಗ್ರಗಾಮಿ ಸಂಘಟನೆಗಳು ಕಾರ್ಯಾಚರಿಸುತ್ತಿವೆ.

ಆರೋಪಿಗಳನ್ನು ಬಂಧಿಸಿದ ತಕ್ಷಣವೇ ಅವರನ್ನು ವಿಮಾನನಿಲ್ದಾಣಕ್ಕೆ ಕೊಂಡೊಯ್ಯಲಾಗಿತ್ತು. ಅಲ್ಲಿಯೇ ಕಾಯುತ್ತಿದ್ದ ಸಿಬಿಐ ತಂಡವು ಅವರನ್ನು 5.45ರ ವಿಮಾನದಲ್ಲಿ ಗೌಹಾಟಿಗೆ ಕೊಂಡೊಯ್ಯಿತು. ಆರೋಪಿಗಳನ್ನು ಬಂಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕೆಲವು ಜನರು ವಿಮಾನನಿಲ್ದಾಣದೆಡೆಗೆ ಧಾವಿಸಲು ಯತ್ನಿಸಿದರೆಂದು ಮೂಲಗಳು ತಿಳಿಸಿವೆ.

ಈ ಕುರಿತು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಮಾತನಾಡಿ, ”ಸಿಬಿಐ, ಸೇನೆ, ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಭದ್ರತಾ ಪಡೆಗಳ ಜಂಟಿ ತಂಡವು ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಚುರಚಂದ್‌ಪುರ ಜಿಲ್ಲೆಯ ನಾಲ್ವರು ಶಂಕಿತರನ್ನು ಬಂಧಿಸಿದೆ” ಎಂದು ತಿಳಿಸಿದ್ದಾರೆ.

”ಇಬ್ಬರು ವಿದ್ಯಾರ್ಥಿನಿಯರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲಾಗುವುದು” ಎಂದು ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಹೇಳಿದರು.

ಮಣಿಪುರದಲ್ಲಿ, ಕಳೆದ ವಾರ 17 ವರ್ಷದ ವಿದ್ಯಾರ್ಥಿ ಹಿಜಾಮ್ ಲಿಂತೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೇಮ್‌ಜೀತ್ ಹತ್ಯೆಯ ವಿರುದ್ಧ ವಿದ್ಯಾರ್ಥಿಗಳು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದರು.

ಸಂತ್ರಸ್ತರ ಕುಟುಂಬಗಳು ತಮ್ಮ ಮಕ್ಕಳನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಂದಿದ್ದಾರೆ ಎಂದು ಶಂಕಿಸಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಂತರ ಮುಖ್ಯಮಂತ್ರಿ ನಿವಾಸದ ಬಳಿ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದ ಕನಿಷ್ಠ 100 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ, ಪೊಲೀಸರು ಮತ್ತು ಸೇನೆಯು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಗುಡ್ಡಗಾಡು ಜಿಲ್ಲೆಯ ಚುರಾಚಂದ್‌ಪುರದಿಂದ ಬಂಧಿಸಿದೆ. ಅಲ್ಲಿ ಮೇ 3 ರಂದು ಜಾತಿ ಹಿಂಸಾಚಾರ ಪ್ರಾರಂಭವಾಗಿತ್ತು.

ಸಿಸಿಟಿವಿ ದೃಶ್ಯದಲ್ಲೇನಿತ್ತು? ವಿದ್ಯಾರ್ಥಿಗಳು ಕಾಣೆಯಾದ ಬಳಿಕ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಪೊಲೀಸರು ಸಿಸಿಟಿವಿಯನ್ನು ಪರೀಕ್ಷಿಸಿದಾಗ ಇಬ್ಬರು ಕಿಡ್ನ್ಯಾಪ್ ಆಗಿರುವುದು ಗೊತ್ತಾಗಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಮೃತದೇಹದ ಚಿತ್ರಗಳು ವೈರಲ್ ಆಗಿದ್ದವು. ಆದರೂ ಅವರ ಮೃತದೇಹ ಪತ್ತೆಯಾಗಿರಲಿಲ್ಲ.

ಇದನ್ನೂ ಓದಿ: ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In Manipur the law and order problem is still continuing it seems. We can’t understand why it is continuing for such a long time. What’s the roll of the state government and the central govt. to curb this violence. Are they r not serious in their roll. Manipur is not a big state when compare with other states of India, may be geographic condition is bit tough. But our army is capable of handling it. But why this delay? We can’t understand. Too much politi localisation of problem may be one of the reason it seems. Any way let us hope and pray for immediate Peace restoration in this tiny state. This is our sincere prayer on this special day of Gandhi Jayanthi.

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...