Homeಮುಖಪುಟತೆಲಂಗಾಣ| ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ: ನಾಲ್ವರ ಬಂಧನ

ತೆಲಂಗಾಣ| ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ: ನಾಲ್ವರ ಬಂಧನ

ಮಹಿಳೆಗೆ ಥಳಿಸಿ, ಕಣ್ಣಿಗೆ ಖಾರ ಪುಡಿ ಹಾಕಿದ್ದಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟ ಆರೋಪಿಗಳು!

- Advertisement -
- Advertisement -

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಕೃಷಿ ಭೂಮಿಯಲ್ಲಿ ಕೆಲಸಕ್ಕೆ ಬರದಿದ್ದಕ್ಕೆ 27 ವರ್ಷದ ಚೆಂಚು ಬುಡಕಟ್ಟು ಮಹಿಳೆಗೆ ಒಂದು ವಾರ ಕಾಲ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಕೊಲ್ಲಾಪುರ ಮಂಡಲದ ಮೊಳಚಿಂತಲಪಲ್ಲಿ ಗ್ರಾಮದಲ್ಲಿ ಮಹಿಳೆಯ ಮೇಲೆ ಆಕೆಯ ಸಹೋದರಿ, ಸೋದರ ಮಾವ ಸೇರಿದಂತೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಕೆಲ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ ಬಳಿಕ ಆಕೆಯನ್ನು ರಕ್ಷಿಸಲಾಗಿದೆ. ಪ್ರಸ್ತುತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಯೊಬ್ಬನ ಒಡೆತನದ ಕೃಷಿ ಭೂಮಿಯಲ್ಲಿ ಕೆಲಸಕ್ಕೆ ಬಾರದಿದ್ದಕ್ಕಾಗಿ ದೊಣ್ಣೆಗಳಿಂದ ಹೊಡೆದು ಚಿತ್ರಹಿಂಸೆ ನೀಡಲಾಯಿತು ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹಲ್ಲೆಗೂ ಮುನ್ನ ಸಂತ್ರಸ್ತೆ ತನ್ನ ಸಹೋದರಿಯೊಂದಿಗೆ ಕೌಟುಂಬಿಕ ಸಮಸ್ಯೆ ಹಿನ್ನೆಲೆ ಜಗಳವಾಡಿದ್ದಳು ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳು ಸಂತ್ರಸ್ತೆಯ ಕಣ್ಣು ಮತ್ತು ದೇಹಕ್ಕೆ ಮೆಣಸಿನ ಹುಡಿ ಹಾಕಿದ್ದಲ್ಲದೆ, ಆಕೆಯ ಖಾಸಗಿ ಭಾಗ ಮತ್ತು ತೊಡೆ ಸುಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜೂನ್ 8 ರಿಂದ 19 ನಡುವೆ ಮಹಿಳೆಗೆ ಚಿತ್ರಹಿಂಸೆ ನೀಡಲಾಗಿದೆ. ಜೂನ್ 21ರ ಶುಕ್ರವಾರ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಯತ್ನ, ಸಂಬಂಧಿತ ಐಪಿಸಿ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಅವರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಗೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ರಾವ್ ತಿಳಿಸಿದ್ದಾರೆ.

ಎರಡು ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿರುವ ಸಚಿವರು, ಆಕೆಯ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಕಾಳಜಿ ವಹಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಬುಡಕಟ್ಟು ನಾಯಕನ ಡಿಎನ್‌ಎ ಪರೀಕ್ಷೆ ಮಾಡಿಸುವ ಹೇಳಿಕೆ: ರಾಜಸ್ಥಾನದ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...