Homeಮುಖಪುಟಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

- Advertisement -
- Advertisement -

ಪ್ರಪಂಚದಾದ್ಯಂತ 16,000 ಪ್ರಕರಣಗಳು ಕಂಡುಬಂದರೂ ಭಾರತದಲ್ಲಿ ಇದುವರೆಗೂ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಇದು ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲವಾದ್ದರಿಂದ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ನೀತಿ ಆಯೋಗದ ತಜ್ಞರಾದ ಡಾ.ವಿ.ಕೆ ಪೌಲ್ ತಿಳಿಸಿದ್ದಾರೆ.

ಸರ್ವೇಕ್ಷಣೆಯನ್ನು ಹೆಚ್ಚು ಮಾಡಲಾಗಿದೆ. ಆದರೂ ನಿಮಗೆ ಅಥವಾ ನಿಮ್ಮ ಸ್ನೇಹಿತರಿಗೆ ಮಂಕಿಪಾಕ್ಸ್ ಖಾಯಿಲೆಯ ಲಕ್ಷಣಗಳು ಕಂಡುಬಂದರೆ ಅದನ್ನು ಮುಚ್ಚಿಡುವ ಬದಲು ವರದಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆಗ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ಯಾನ್ಸರ್‌ನಂತಹ ಇತರ ಕಾಯಿಲೆಗಳಿರುವ ರೋಗಿಗಳು ಇನ್ನೂ ಹೆಚ್ಚು ಜಾಗರೂಕರಾಗಿರಬೇಕು. ಆದರೆ ಯಾವುದೇ ಕಾರಣಕ್ಕೂ ಗಾಬರಿಯಾಗಬೇಡಿ. ಇದು ಕೋವಿಡ್‌ನಂತೆ ವೇಗವಾಗಿ ಹರಡುವ ರೋಗವಲ್ಲ. ಜೊತೆಗೆ ಸ್ವಯಂ ಚಿಕಿತ್ಸೆ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದ್ದು ತಪ್ಪದೇ ಆಸ್ಪತ್ರೆಗೆ ವರದಿ ಮಾಡಬೇಕು ಎಂದಿದ್ದಾರೆ.

ಭಾರತದಲ್ಲಿ ದೆಹಲಿ, ಕೇರಳ, ಉತ್ತರ ಪ್ರದೇಶ ಮತ್ತು ತೆಲಂಗಾಣದಲ್ಲಿ ತಲಾ ಒಂದೊಂದಿ ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. 74 ದೇಶಗಳಲ್ಲಿ 16,000 ಪ್ರಕರಣಗಳು ವರದಿಯಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಹೇರಿದೆ.

ಮಂಕಿಪಾಕ್ಸ್ ಸೋಂಕು:

ಮಂಕಿಪಾಕ್ಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುತ್ತದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್ವಿರಿಡೆ (Poxviridae) ಕುಟುಂಬದಲ್ಲಿ ಆರ್ಥೋಪಾಕ್ಸ್ (Orthopoxvirus) ವೈರಸ್ ಕುಲಕ್ಕೆ ಸೇರಿದೆ. ಆರ್ಥೋಪಾಕ್ಸ್‌ವೈರಸ್ ಕುಲವು ವೆರಿಯೊಲಾ ವೈರಸ್ (ಸಿಡುಬಿಗೆ ಕಾರಣವಾಗುತ್ತದೆ) ಎಂದು ಸಿಡಿಸಿ (Centers for Disease Control and Prevention) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಮಂಕಿಪಾಕ್ಸ್ ಸಾಮಾನ್ಯವಾಗಿ ಜ್ವರ, ತಲೆನೋವು ಮತ್ತು ಚರ್ಮದ ದದ್ದುಗಳನ್ನು ಒಳಗೊಂಡಿರುವ ರೋಗಲಕ್ಷಣಗಳೊಂದಿಗೆ ಉಂಟಾಗುವ ವೈರಲ್ ಸೋಂಕು. ಈ ಸೋಂಕು 1958 ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಮಧ್ಯ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳಲ್ಲಿನ ಜನರಲ್ಲಿ ಖಾಯಿಲೆ ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡು: ತಂದೆಯಿಂದಲೆ ನವವಿವಾಹಿತ ಮಗಳು, ಅಳಿಯನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...