Homeಮುಖಪುಟಬಿಹಾರ: ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು: ನಾಲ್ವರು ಸಾವು, 100 ಮಂದಿಗೆ...

ಬಿಹಾರ: ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು: ನಾಲ್ವರು ಸಾವು, 100 ಮಂದಿಗೆ ಗಾಯ

- Advertisement -
- Advertisement -

ದೆಹಲಿ- ಅಸ್ಸಾಂ ಕಾಮಾಖ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ ರಘುನಾಥಪುರ ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನಿಂದ ಹೊರಟ ರೈಲು ಅಸ್ಸಾಂನ ಗುವಾಹಟಿ ಬಳಿಯ ಕಾಮಾಖ್ಯಕ್ಕೆ ತೆರಳುತ್ತಿತ್ತು.

ರೈಲು ಸಂಖ್ಯೆ 12506ರಲ್ಲಿ ಹಲವು ಬೋಗಿಗಳು ರಾತ್ರಿ 9.35ರ ವೇಳೆಗೆ ದಾನಾಪುರ ವಿಭಾಗದ ರಘುನಾಥಪುರ ನಿಲ್ದಾಣ ಬಳಿ ಹಳಿತಪ್ಪಿವೆ ಎಂದು ಪೂರ್ವ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ತರುಣ್ ಪ್ರಕಾಶ್ ಹೇಳಿಕೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಳಿಕ ದುರಂತದ ಕಾರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಘಟನೆಯ ಕುರಿತು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಮಾತನಾಡಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಗಾಯಾಳುಗಳನ್ನು ಪಾಟ್ನಾದ ಏಮ್ಸ್‌ಗೆ ದಾಖಲಿಸಲಾಗಿದೆ.

ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ವಿಪತ್ತು ನಿರ್ವಹಣಾ ಇಲಾಖೆ, ಆರೋಗ್ಯ ಇಲಾಖೆ ಮತ್ತು ಬಕ್ಸರ್ ಮತ್ತು ಭೋಜ್‌ಪುರದ ಜಿಲ್ಲಾ ಅಧಿಕಾರಿಗಳೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯದ ಕುರಿತು ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬಕ್ಸರ್ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು.

ಇದನ್ನು ಓದಿ: ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳಲ್ಲಿ ಬದಲಾವಣೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

0
ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 'ಸಮಯ...