Homeಮುಖಪುಟಭಯೋತ್ಪಾದಕರ ನಂಟು ಆರೋಪ : ನಾಲ್ವರು ಸರ್ಕಾರಿ ಉದ್ಯೋಗಿಗಳನ್ನು ವಜಾಗೊಳಿಸಿದ ಜಮ್ಮು ಕಾಶ್ಮೀರ ಆಡಳಿತ

ಭಯೋತ್ಪಾದಕರ ನಂಟು ಆರೋಪ : ನಾಲ್ವರು ಸರ್ಕಾರಿ ಉದ್ಯೋಗಿಗಳನ್ನು ವಜಾಗೊಳಿಸಿದ ಜಮ್ಮು ಕಾಶ್ಮೀರ ಆಡಳಿತ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ ಆಡಳಿತವು ಭಯೋತ್ಪಾದಕ ಸಂಬಂಧ, ಕಾನೂನುಬಾಹಿರ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ನಾಲ್ವರು ಸರ್ಕಾರಿ ನೌಕರರನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಿದೆ.

ವಜಾಗೊಂಡವರಲ್ಲಿ ಇಬ್ಬರು ಪೊಲೀಸ್ ಪೇದೆಗಳು, ಶಾಲಾ ಶಿಕ್ಷಣ ಇಲಾಖೆಗೆ ನಿಯೋಜಿಸಲಾದ ಕಿರಿಯ ಸಹಾಯಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಮಟ್ಟದ ಕಾರ್ಯಕರ್ತ ಸೇರಿದ್ದಾರೆ.

ವಜಾಗೊಂಡ ಪುಲ್ವಾಮಾ ಜಿಲ್ಲೆಯ ಕಾನ್‌ ಸ್ಟೇಬಲ್ ಇಮ್ತಿಯಾಝ್ ಅಹ್ಮದ್ ಲೋನ್ ಅವರು ಭಯೋತ್ಪಾದಕ ಕೃತ್ಯಗಳನ್ನು ಕಾರ್ಯಗತಗೊಳಿಸಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸರಬರಾಜು, ಸಾಗಣೆ ಮತ್ತು ವಿತರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತರ ಮೂವರಲ್ಲಿ ಶಿಕ್ಷಣ ಇಲಾಖೆಯ ಉದ್ಯೋಗಿ ಬಾಜಿಲ್ ಅಹ್ಮದ್ ಮಿರ್ ಮತ್ತು ಕಾನ್‌ಸ್ಟೇಬಲ್ ಮುಷ್ತಾಕ್ ಅಹ್ಮದ್ ಪಿರ್ ಸೇರಿದ್ದು, ಇಬ್ಬರೂ ಕುಪ್ವಾರಾ ಜಿಲ್ಲೆಯವರು. ಪಂಚಾಯತ್ ರಾಜ್ ಇಲಾಖೆಯ ಮೊಹಮ್ಮದ್ ಝೈದ್ ಶಾ ಅವರು ಬಾರಾಮುಲ್ಲಾ ಜಿಲ್ಲೆಗೆ ಸೇರಿದವರು. ಮಾದಕವಸ್ತು ಕಳ್ಳಸಾಗಣೆ ಮತ್ತು ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಈ ಮೂಲಕ ಭಯೋತ್ಪಾದನಾ ಕೃತ್ಯಗಳಿಗೆ ಧನ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಬೀದಿ ಹಿಂಸಾಚಾರ ಪ್ರಚೋದಿಸುವಲ್ಲಿ ಪಾತ್ರ ವಹಿಸಿದ ಆರೋಪದ ಮೇಲೆ ಜೆ & ಕೆ ಬ್ಯಾಂಕ್ ಕೂಡ ಇತ್ತೀಚೆಗೆ ಹಿರಿಯ ಅಧಿಕಾರಿಯನ್ನು ವಜಾಗೊಳಿಸಿದೆ. ಆದರೆ ಇದನ್ನು ಬ್ಯಾಂಕ್ ಆಡಳಿತ ಇನ್ನೂ ದೃಢೀಕರಿಸಿಲ್ಲ.

ಇದನ್ನೂ ಓದಿ : ಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...