- Advertisement -
- Advertisement -
ಕೇಂದ್ರ ಸರ್ಕಾರ ನಾಲ್ಕು ಪ್ರತಿಶತದಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೆಚ್ಚಳದಿಂದ ತುಟ್ಟಿ ಭತ್ಯೆ ಶೇಕಡಾ 21 ಕ್ಕೆ ತಲುಪಿದ್ದು, 48 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಇದರಿಂದ ಅನುಕೂಲವಾಗಲಿದೆ.
“ಕೇಂದ್ರ ಸರ್ಕಾರಿ ನೌಕರರಿಗೆ ನಾಲ್ಕು ಶೇಕಡಾ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ತುಟ್ಟಿ ಭತ್ಯೆ ಹೆಚ್ಚಳವು ಜನವರಿ 1, 2020 ರಿಂದ ಅನ್ವಯವಾಗಲಿದೆ.
ಈ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರವು 14,595 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವನ್ನು ಭರಿಸಲಿದೆ ಎಂದು ಹೇಳಿದರು. ತುಟ್ಟಿ ಭತ್ಯೆ ನಾಲ್ಕು ಶೇಕಡಾ 21 ಕ್ಕೆ ತಲುಪಿದ್ದು, 48 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಇದರಿಂದ ಅನುಕೂಲವಾಗಲಿದೆ.


