Homeಮುಖಪುಟಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

- Advertisement -
- Advertisement -

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (CUSAT )ನಲ್ಲಿ ಶನಿವಾರ ನಡೆದ ಓಪನ್ ಏರ್ ‘ಟೆಕ್‌ ಫೆಸ್ಟ್‌’ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಎಂದು ಗುರುತಿಸಲಾಗಿದೆ. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.

CUSAT ಆಯೋಜಿಸಿದ ವಾರ್ಷಿಕ ಟೆಕ್ ಉತ್ಸವದ ಎರಡನೇ ದಿನವಾದ ನಿನ್ನೆ 1000–1500 ಆಸನ ಸಾಮರ್ಥ್ಯದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭಾಂಗಣ ಭಾಗಶಃ ತುಂಬಿತ್ತು. ಈ ವೇಳೆ ಹಠಾತ್ತನೆ ಮಳೆ ಸುರಿದಿದ್ದರಿಂದ ನೆರೆದಿದ್ದ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣದತ್ತ ಓಡಲಾರಂಭಿಸಿದರು. ಈ ವೇಳೆ ನೂಕು ನುಗ್ಗಲು ಸಂಭವಿಸಿ ದುರಂತ ಉಂಟಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಎಡಿಜಿಪಿ) ಎಂ.ಆರ್‌ ಅಜಿತ್‌ ಕುಮಾರ್‌ ತಿಳಿಸಿದ್ದಾರೆ.

ಗಾಯಗೊಂಡಿರುವ ವಿದ್ಯಾರ್ಥಿ‌ಗಳನ್ನು ಕಲಮಶ್ಶೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.

ಟಿಕೆಟ್‌ ಪಡೆದವರಿಗೆ ಮಾತ್ರವೇ ಸಭಾಂಗಣದೊಳಗೆ ಪ್ರವೇಶ ಇತ್ತು. ಆದರೆ ಸಭಾಂಗಣದ ಹೊರಗೆ ಹಲವು ಸ್ಥಳೀಯರೂ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ತುರ್ತು ಸಂಪುಟ ಸಭೆ ಕರೆದು ದುರಂತದ ಬಗ್ಗೆ ಮಾಹಿತಿ ಪಡೆದು ತನಿಖೆಗೆ ಆದೇಶಿಸಿದ್ದಾರೆ.

ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕೋವಿಡ್‌ ಸಾಂಕ್ರಾಮಿಕ ರೋಗದ ನಂತರ ಇದು ಮೊದಲ ಬಾರಿಗೆ ಏರ್ಪಡಿಸಿದ ಕಾರ್ಯಕ್ರಮವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...