Homeಮುಖಪುಟದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

- Advertisement -
- Advertisement -

ದೆಹಲಿಯ ಬಾಪ ನಗರ ಪ್ರದೇಶದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯೊಬ್ಬನನ್ನು ಜನರ ಗುಂಪು ಥಳಿಸಿದೆ. ಕಾರ್ಮಿಕನನ್ನು ಬಂಧಿಸಲಾಗಿದ್ದು, ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ಮಗು ಜೀನ್ಸ್ ತಯಾರಿಕಾ ಕಾರ್ಖಾನೆಯ ಬಳಿಯ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ.

ಜೀನ್ಸ್ ತಯಾರಿಕಾ ಕಾರ್ಖಾನೆಯ ಕೆಲಸಗಾರನಾದ ಆರೋಪಿಯು ಮಗುವಿಗೆ ಸಿಹಿತಿಂಡಿಗಳ ಒಳಗೆ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌: ಅಪ್ರಾಪ್ತೆ ಮೇಲೆ 7 ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಬಳಿಕ ಮಗು ನೆಗೆ ಹೋಗಿ ಪೋಷಕರಿಗೆ ಘಟನೆ ತಿಳಿಸಿದ್ದು, ಮಗುವಿನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಜೀನ್ಸ್ ಕಾರ್ಖಾನೆ ಬಳಿ ತೆರಳಿದ ಪೋಷಕರು ಮತ್ತು ಸ್ಥಳೀಯರು ಆರೋಪಿಯನ್ನು ಥಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತಿಚೆಗೆ ನೈರುತ್ಯ ದೆಹಲಿಯ ಕಂಟೋನ್ಮೆಂಟ್ ಬಳಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ನಡೆದಿದ್ದಅತ್ಯಾಚಾರ ಮತ್ತು ಕೊಲೆ ನಡೆದಿತ್ತು.

ಆಗಸ್ಟ್ 1 ರಂದು ದಲಿತ ಬಾಲಕಿ ಮೇಲೆ 55 ವರ್ಷದ ಸ್ಮಶಾನದ ಪೂಜಾರಿ ರಾಧೇ ಶ್ಯಾಮ್ ಮತ್ತು ಸ್ಮಶಾನದ ಉದ್ಯೋಗಿ ಕುಲದೀಪ್ ಸಿಂಗ್ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ. ಅತ್ಯಾಚಾರ ನಡೆಸಿ, ಕೊಲೆ ಮಾಡಿ, ಕುಟುಂಬದ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಕುರಿತು ದೇಶದಲ್ಲಿ ಪ್ರತಿಭಟನೆ, ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಾಲಕಿಯ ತಾಯಿಯ ಹೇಳಿಕೆಯ ಆಧಾರದ ಮೇಲೆ ದೆಹಲಿ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆ ನಡೆಯುತ್ತಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -