Homeಕರ್ನಾಟಕ40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್

40% ಕಮಿಷನ್ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಿದ ಹೈಕೋರ್ಟ್

- Advertisement -
- Advertisement -

ʼಶೇಕಡ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ನ.4) ರದ್ದುಪಡಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪುರಸ್ಕರಿಸಿದ್ದಾರೆ.

2019ರಿಂದ 2023ರವರೆಗೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕಾ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷ, ಅದರ ಕರ್ನಾಟಕ ಘಟಕ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಕಾಂಗ್ರೆಸ್ ಪ್ರಕಟಿಸಿದ್ದ ಜಾಹೀರಾತುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರವನ್ನು ‘ಶೇ.40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂದು ಟೀಕಿಸಲಾಗಿತ್ತು. ಸಾರ್ವಜನಿಕ ಖರೀದಿ, ಕಾಮಗಾರಿಗಳ ಗುತ್ತಿಗೆ ನೀಡಿಕೆ ಹಾಗೂ ಕೋವಿಡ್-19 ಸಂಬಂಧಿತ ಸಾಮಗ್ರಿಗಳ ಪೂರೈಕೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಅಲ್ಲದೆ, ಭ್ರಷ್ಟಾಚಾರದ ಮೂಲಕ ಕರ್ನಾಟಕದ ಜನರಿಂದ ಬಿಜೆಪಿ ಸರ್ಕಾರ ₹1,500 ಕೋಟಿ ಲೂಟಿ ಮಾಡಿದೆ ಎಂದು ಜಾಹೀರಾತುಗಳಲ್ಲಿ ಆರೋಪಿಸಲಾಗಿತ್ತು.

ಸರ್ಕಾರಿ ಹುದ್ದೆಗಳನ್ನು ಪಡೆಯಲು ‘ಸ್ಕೋರ್ ಕಾರ್ಡ್’ ಮತ್ತು ‘ರೇಟ್ ಕಾರ್ಡ್’ ವ್ಯವಸ್ಥೆ ಜಾರಿಯಲ್ಲಿತ್ತು ಹಾಗೂ ನೇಮಕಾತಿಗಳಿಗಾಗಿ ಲಂಚ ನೀಡಬೇಕಾಗಿತ್ತು ಎಂಬ ಆರೋಪಗಳನ್ನೂ ಕಾಂಗ್ರೆಸ್‌ ಮಾಡಿತ್ತು. ಇದೇ ರೀತಿಯ ಆರೋಪಗಳನ್ನು ರಾಹುಲ್ ಗಾಂಧಿ ಸಾರ್ವಜನಿಕ ಭಾಷಣವೊಂದರಲ್ಲೂ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

2023ರ ಮೇ ತಿಂಗಳಲ್ಲಿ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು. ಇದರ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಕಾಂಗ್ರೆಸ್‌ ನಾಯಕರ ವಿರುದ್ಧ 2024ರಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು.

ಈ ಪ್ರಕರಣವನ್ನು ರದ್ದುಪಡಿಸುವಂತೆ ಕೆಪಿಸಿಸಿ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಿಜೆಪಿ ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲಿಸಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಜಾಹೀರಾತುಗಳಲ್ಲಿ ಬಿಜೆಪಿ ರಾಜಕೀಯ ಪಕ್ಷದ ವಿರುದ್ಧ ಮಾನಹಾನಿಕರ ಆರೋಪಗಳನ್ನು ಮಾಡಿರಲಿಲ್ಲ; ಬದಲಿಗೆ ಅಂದಿನ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಚಿವ ಸಂಪುಟದ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಲಾಗಿತ್ತು ಎಂದು ಅರ್ಜಿದಾರರು ವಾದಿಸಿದ್ದರು.

ಆರೋಪಿತ ಹೇಳಿಕೆಗಳಿಂದ ನೇರವಾಗಿ ಮಾನಹಾನಿಗೊಳಗಾದ ವ್ಯಕ್ತಿ ಅಥವಾ ಸಂಸ್ಥೆ ಬಿಜೆಪಿ ಅಲ್ಲ. ಹೀಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಬಿಜೆಪಿಗೆ ಕಾನೂನುಬದ್ಧ ಅರ್ಹತೆ ಇಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ಇದೇ ಪ್ರಕರಣದಲ್ಲಿ 2026ರ ಫೆಬ್ರವರಿ 17ರಂದು ಕರ್ನಾಟಕ ಹೈಕೋರ್ಟ್ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಿತ್ತು.

Courtesy : kannada.barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಔಪಚಾರಿಕ ಬಂಧನವಲ್ಲ, ವ್ಯಕ್ತಿಯನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಲೆಕ್ಕ’: ಸುಪ್ರೀಂ ಮಹತ್ವದ ತೀರ್ಪು; ನಾಲ್ವರು ಆರೋಪಿಗಳ ಬಿಡುಗಡೆಗೆ ಆದೇಶ

ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಸಾಂವಿಧಾನಿಕ ಗಡುವು ಆರಂಭವಾಗುತ್ತದೆ. ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದ ಈ ಅವಧಿಯನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ...

ಹಳೆಯ ವಿದ್ಯಾರ್ಥಿಗೆ ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದನೆ; ಕ್ಷಮೆಯಾಚನೆಯೊಂದಿಗೆ ಪ್ರಕರಣ ಮುಕ್ತಾಯಕ್ಕೆ ಪ್ರಯತ್ನ

ಹೈದರಾಬಾದ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಜಯ್ ರಾಮದಾಸ್ ಮಂಡಲಾ ಅವರು ಇಮೇಲ್ ಮೂಲಕ ತಮ್ಮನ್ನು 'ದಲಿತ ಅಸ್ಪೃಶ್ಯ ಮೂರ್ಖ' ಎಂದು ನಿಂದಿಸಿದ್ದಾರೆ ಮತ್ತು ಬಿಹಾರ ಹಾಗೂ ಜಾರ್ಖಂಡ್‌ನ ವಿದ್ಯಾರ್ಥಿಗಳನ್ನು...

SIR ನಡೆಯುತ್ತಿರುವ ರಾಜ್ಯಗಳಲ್ಲೂ ಆನ್‌ಲೈನ್ ಫಾರಂ-6 ಮತ್ತು ಘೋಷಣಾ ಪತ್ರವನ್ನು ಪ್ರತ್ಯೇಕಿಸಿದ ಚು. ಆಯೋಗ

ಭಾರತೀಯ ಚುನಾವಣಾ ಆಯೋಗ (ಇಸಿಐ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ನಡೆಯುತ್ತಿರುವ ರಾಜ್ಯಗಳಲ್ಲೂ, ಹೊಸ ಮತದಾರರ ನೋಂದಣಿಗೆ ಬಳಸಲಾಗುವ ಫಾರಂ-6 ಮತ್ತು ಅದರ ಜೊತೆಗಿನ 'ಘೋಷಣಾ ಪತ್ರವನ್ನು' (ಡಿಕ್ಲರೇಷನ್)...

ಬಿಜೆಪಿ ಕಾರ್ಯಕರ್ತನ ‘ಪಾಕಿಸ್ತಾನ್ ಜಿಂದಾಬಾದ್’ ಪ್ರಕರಣ ರದ್ದು! ಪ್ರತಿಭಟನೆ ವೇಳೆ ‘ಬಾಯಿತಪ್ಪಿ ಬಂದ ಮಾತು’ ಎಂಬ ವಾದ ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಭಾರತೀಯ ಜನತಾ ಪಾರ್ಟಿ (BJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾರ್ಯಕರ್ತನೊಬ್ಬನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಯಿತಪ್ಪಿ...

“ಒಬ್ಬ ವ್ಯಕ್ತಿ 10 ಜನರ ಕೆಲಸ ಮಾಡಬೇಕು”: ಕಾರ್ಮಿಕ ಹಕ್ಕುಗಳ ಉಲ್ಲಂಘನೆ ಖಂಡಿಸಿ ಜೆಎನ್‌ಯುನಲ್ಲಿ 500ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರ ಮುಷ್ಕರ

ನವದೆಹಲಿ: ಕಾನೂನುಬಾಹಿರ ವೇತನ ಕಡಿತ, ಶಾಸನಬದ್ಧ ಬೋನಸ್ ಪಾವತಿಸದಿರುವುದು, ಕಾರ್ಮಿಕರನ್ನು ಅನಿಯಂತ್ರಿತವಾಗಿ ಅಮಾನತುಗೊಳಿಸುವುದು ಮತ್ತು ಸಿಬ್ಬಂದಿ ಕೊರತೆಯಿಂದ ಹೆಚ್ಚುತ್ತಿರುವ ಕೆಲಸದ ಹೊರೆ ಸೇರಿದಂತೆ ಹಲವು ಕಾರ್ಮಿಕ ಹಕ್ಕುಗಳ ಉಲ್ಲಂಘನೆಗಳನ್ನು ಖಂಡಿಸಿ ದೆಹಲಿಯ ಜವಾಹರಲಾಲ್...

ಅಮೆರಿಕ ಮಧ್ಯಂತರ ಚುನಾವಣೆ | ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಸಾಧಿಸಿದ ಡೆಮಾಕ್ರಟಿಕ್ ಪಕ್ಷ : ಅಧ್ಯಕ್ಷ ಟ್ರಂಪ್‌ಗೆ ತೀವ್ರ ಮುಖಭಂಗ

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ (US Midterm Elections 2026) ಡೆಮಾಕ್ರಟಿಕ್ ಪಕ್ಷವು ಐತಿಹಾಸಿಕ 'ಬ್ಲೂ ವೇವ್' (ನೀಲಿ ಅಲೆ) ಸೃಷ್ಟಿಸಿದ್ದು, ಸಂಸತ್ತಿನ ಸದನಗಳಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಮತ್ತು ಸೆನೆಟ್ (ಮೇಲ್ಮನೆ)...

ಭಾರತಕ್ಕೆ ಬಿಗ್ ರಿಲೀಫ್ ಕೊಟ್ಟ ಇರಾನ್: ಹೊರ್ಮುಜ್ ಜಲಸಂಧಿ ನಿರ್ಬಂಧದಿಂದ ಭಾರತೀಯ ನೌಕೆಗಳಿಗೆ ವಿನಾಯಿತಿ!

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವಿನ ಶೀತಲ ಸಮರ ಹಾಗೂ ಅಮೆರಿಕದ ಮಿಲಿಟರಿ ಹಾಜರಾತಿಯಿಂದಾಗಿ ತೈಲ ಸಾರಿಗೆ ಮಾರ್ಗಗಳಲ್ಲಿ ಭದ್ರತಾ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ, ಇರಾನ್ ಸರ್ಕಾರವು ಜಾಗತಿಕ ವಾಣಿಜ್ಯ ಕ್ಷೇತ್ರಕ್ಕೆ ಅತ್ಯಂತ ಮಹತ್ವದ ನಿರ್ಧಾರವೊಂದನ್ನು...

ಗುಜರಾತ್: ‘ತಪ್ಪಿತಸ್ಥನೆಂದು ಸಾಬೀತುಪಡಿಸಲು ಪುರಾವೆಗಳಿಲ್ಲ’: ಗೋಮಾಂಸ ಸಂಗ್ರಹ ಆರೋಪದ ಮುಸ್ಲಿಂ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ಗೋಮಾಂಸ ಸಂಗ್ರಹಿಸಿ ಮಾರಾಟಕ್ಕೆ ಸಿದ್ಧಪಡಿಸಿಕೊಂಡಿದ್ದಾರೆ ಎಂಬ ಆರೋಪದಡಿ ಸುಮಾರು ಹತ್ತು ತಿಂಗಳಿನಿಂದ ಜೈಲಿನಲ್ಲಿದ್ದ ಗುಜರಾತ್‌ನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಯ ವಿರುದ್ಧ ಈ ಹಿಂದೆ ದಾಖಲಾಗಿದ್ದ...

ದೆಹಲಿಯ ‘ವೋಟ್ ಚೋರಿ’ ರ‍್ಯಾಲಿಗೆ ಗೈರು: ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ 60 ಪ್ರಮುಖ ಪದಾಧಿಕಾರಿಗಳು ಅಮಾನತು!

ಅಖಿಲ ಭಾರತ ಯುವ ಕಾಂಗ್ರೆಸ್ ನಾಯಕತ್ವವು ಕಠಿಣ ನಿರ್ಧಾರ ತಳೆದಿದ್ದು, ರಾಷ್ಟ್ರೀಯ ನಾಯಕತ್ವ ನೀಡಿದ್ದ ಕರೆಗೆ ಗೈರುಹಾಜರಾದ ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ ಬರೋಬ್ಬರಿ 60 ಪ್ರಮುಖ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ...

ಮೂರು ಕೋಟಿ ಒಳನುಸುಳುಕೋರರು ಎಲ್ಲಿಂದ ಬಂದರು?: ‘ವೋಟ್ ಚೋರಿ’ ಬಗ್ಗೆ ಮುಕ್ತ ಚರ್ಚೆಗೆ ಬನ್ನಿ: ಮೋದಿ-ಅಮಿತ್ ಶಾಗೆ ಖರ್ಗೆ ಸವಾಲು

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನದ (ವೋಟ್ ಚೋರಿ) ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುವ ಧೈರ್ಯ ತೋರಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿಟ್ಟಿರುವ ಮುಕ್ತ ಚರ್ಚೆಯ ಸವಾಲನ್ನು ಸ್ವೀಕರಿಸಿ ಎಂದು ಕಾಂಗ್ರೆಸ್ ರಾಷ್ಟ್ರೀಯ...