Homeಮುಖಪುಟ40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದಿನ ಸರ್ಕಾರದಲ್ಲಿ ನಡೆದ ಅವ್ಯವಹಾರಗಳು, ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಪುನರುಚ್ಚರಿಸಿದ್ದಾರೆ.

ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, “ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಸಹ ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾವು ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು ಇದೇ ಸಂದರ್ಭದಲ್ಲಿ ತಿಳಿಸಿದರು.

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್.ಸಿ.ಸಿ.ಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...