Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...