Homeಮುಖಪುಟಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

- Advertisement -
- Advertisement -

ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಇಲ್ಲಿಯವರೆಗೆ ಒಟ್ಟು 40 ಪ್ರಥಮ ಮಾಹಿತಿ ವರದಿಗಳು (ಎಫ್‌ಐಆರ್) ದಾಖಲಾಗಿವೆ ಎಂದು ಕೇರಳ ರಾಜ್ಯ ಸರ್ಕಾರ ಜನವರಿ 16 ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಗೋಪಾಲಕೃಷ್ಣ ಕುರುಪ್ ಅವರು ನ್ಯಾಯಮೂರ್ತಿಗಳಾದ ಎ.ಕೆ ಜಯಶಂಕರನ್ ನಂಬಿಯಾರ್ ಮತ್ತು ಸಿಎಸ್ ಸುಧಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಶೇಷ ಪೀಠಕ್ಕೆ ವಿವರಗಳನ್ನೊಳಗೊಂಡ ಟಿಪ್ಪಣಿಯನ್ನು ಸಲ್ಲಿಸಿದ್ದಾರೆ.

ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸೆಪ್ಟೆಂಬರ್ 5 ರಂದು ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚಿಸಲಾಗಿದೆ.

ಆಗಸ್ಟ್ 2024 ರಲ್ಲಿ ಬಿಡುಗಡೆಯಾದ ಹೇಮಾ ಸಮಿತಿ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ನಡೆದ ಮಹಿಳಾ ಕಲಾವಿದರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭದಲ್ಲಿ 35 ಪ್ರಕರಣಗಳನ್ನು ದಾಖಲಿಸಿತ್ತು. ನಂತರ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ನೇಮಿಸಲಾದ ನೋಡಲ್ ಅಧಿಕಾರಿಗೆ ಹೆಚ್ಚುವರಿಯಾಗಿ ಎಂಟು ದೂರುಗಳು ಸಲ್ಲಿಕೆಯಾಗಿದೆ. ಅದನ್ನು ಆಧರಿಸಿ ಇನ್ನೂ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದ ಅಮಿಕಸ್ ಕ್ಯೂರಿ ಮಿಥಾ ಸುಧೀಂದ್ರನ್ ಅವರು ನ್ಯಾಯಯುತ ಕೆಲಸದ ಸ್ಥಳದ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಸ್ತಾವಿತ ಕಾನೂನಿನ ಕರಡನ್ನು ಒಳಗೊಂಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

‘ಕೇರಳ ಮನರಂಜನಾ ಉದ್ಯಮ (ಸಮಾನತೆ ಮತ್ತು ಸಬಲೀಕರಣ) ಕಾಯ್ದೆ’ ಎಂಬ ಶೀರ್ಷಿಕೆಯ ಕರಡು ಕಾನೂನು ಕೆಲಸದ ಪರಿಸ್ಥಿತಿಗಳು, ನೇಮಕಾತಿ ಪದ್ಧತಿಗಳು ಮತ್ತು ವೇತನದಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕರಡು ಕಾನೂನನ್ನು ಪರಿಶೀಲಿಸಿ ಪ್ರತಿಕ್ರಿಯೆ ನೀಡಲಿದೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಾಲಯ ಕೂಡ ಕರಡು ಪ್ರತಿಯನ್ನು ಪರಿಶೀಲಿಸುವುದಾಗಿ ಹೇಳಿದೆ. ಇದಲ್ಲದೆ, ಮಹಿಳೆಯರು ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಸಿನಿಮಾ ಇಂಡಸ್ಟ್ರಿಯಲ್ಲಿ ಮಹಿಳೆಯರು ಎದುರಿಸುತ್ತಿರುವ ತಾರತಮ್ಯವನ್ನು ಪರಿಹರಿಸಲು ಬಹರೂಪಿ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದೆ.

“ನಾವು ಸ್ವಲ್ಪ ಮಟ್ಟಿಗೆ ತಾರತಮ್ಯವನ್ನು ನಿಭಾಯಿಸಿದ್ದರೂ, ಬಹುರೂಪದ ತಾರತಮ್ಯವನ್ನು ಸಾಮಾನ್ಯವಾಗಿ ಪರಿಹರಿಸಲಾಗುವುದಿಲ್ಲ. ಬಹು ಹಂತಗಳಲ್ಲಿ ಬಹುರೂಪದ ತಾರತಮ್ಯದಲ್ಲಿ ದೊಡ್ಡ ಅಂತರವಿದೆ. ಉದಾ : ದಲಿತ ಮಹಿಳೆಯಂತೆ. ಆಕೆ (ದಲಿತ ಮಹಿಳೆ) ಮಹಿಳೆ ಎಂಬ ಕಾರಣಕ್ಕೆ ಮತ್ತು ಸಾಮಾಜಿಕ ಸ್ಥಾನಮಾನ ಕಾರಣಕ್ಕೆ ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಾರೆ. ಕೇರಳದಲ್ಲಿ ಈ ಸಮಸ್ಯೆ ಅಷ್ಟಾಗಿ ಇಲ್ಲ. ಆದರೆ, ಉತ್ತರದ ರಾಜ್ಯಗಳಲ್ಲಿ ಇದು ತುಂಬಾ ದೊಡ್ಡ ಮಟ್ಟದಲ್ಲಿದೆ. ಮಹಿಳೆಯರು ಎದುರಿಸುತ್ತಿರುವ ಆರ್ಥಿಕ ಅಸಮಾನತೆ ಇತ್ಯಾದಿಗಳನ್ನೂ ನಾವು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿರುವುದಾಗಿ ಲೈವ್ ಲಾ  ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 6ಕ್ಕೆ ಮುಂದೂಡಿದೆ. ಈ ಪ್ರಕರಣದ ಮೊದಲ ವಿಚಾರಣೆ ಸೆಪ್ಟೆಂಬರ್ 10, 2024 ರಂದು ನಡೆದಿತ್ತು. ಆಗ ಹೇಮಾ ಸಮಿತಿಯ ವರದಿ ಸಂಬಂಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.

ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...