Homeಮುಖಪುಟಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

- Advertisement -
- Advertisement -

ಬುಡಕಟ್ಟು ಯುವತಿಯೊಬ್ಬರು ಅಂತರ್ಜಾತಿ ಮದುವೆಯಾಗಿದ್ದಕ್ಕೆ ಆಕೆಯ ಕುಟುಂಬದ 40 ಮಂದಿ ತಲೆ ಬೋಳಿಸಿಕೊಂಡು ಶುದ್ದೀಕರಣ ನಡೆಸಿದ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ ಎಂದು newindianexpress.com ವರದಿ ಮಾಡಿದೆ.

ಶುದ್ದೀಕರಣದ ವೇಳೆ ಗ್ರಾಮ ದೇವತೆಯ ಮುಂದೆ ಮೇಕೆ, ಕೋಳಿ ಮತ್ತು ಹಂದಿಗಳನ್ನು ಬಲಿ ನೀಡಲಾಗಿದೆ ಎಂದು ವರದಿ ಹೇಳಿದೆ. ರಾಯಗಡ ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಗೋರಖ್‌ಪುರ ಪಂಚಾಯಿತಿ ವ್ಯಾಪ್ತಿಯ ಬೈಗಾನಗುಡ ಗ್ರಾಮದಲ್ಲಿ ಗುರುವಾರ (ಜೂ.19) ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸುಮಾರು 20 ವರ್ಷ ವಯಸ್ಸಿನ ಬುಡಕಟ್ಟು ಸಮುದಾಯದ ಯುವತಿ ಮತ್ತು ಎಸ್‌ಸಿ ಸಮುದಾಯ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬುಡಕಟ್ಟು ಸಮುದಾಯದವನಲ್ಲ ಎಂಬ ಕಾರಣಕ್ಕೆ ಇವರ ಮದುವೆಗೆ ಯುವತಿ ಕಡೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನು ಲೆಕ್ಕಿಸದೆ ಯುವಜೋಡಿ ಮದುವೆಯಾಗಿದೆ.

ಯುವತಿಯ ಸಮುದಾಯದಲ್ಲಿ ಅನ್ಯ ಜಾತಿಯವರನ್ನು ಮದುವೆಯಾಗಲು ಅವಕಾಶ ಇಲ್ಲ. ಹಾಗೇನಾದರು ಮದುವೆಯಾದರೆ, ಅವರ ಇಡೀ ಕುಟುಂಬ ಮತ್ತು ಸಂಬಂಧಿಕರು ಗ್ರಾಮ ದೇವತೆಯ ಕೋಪಕ್ಕೆ ತುತ್ತಾಗುತ್ತಾರೆ. ದೇವತೆಯ ಕೋಪ ತಣಿಸಲು ಇಡೀ ಕುಟುಂಬ ಮತ್ತು ಸಂಬಂಧಿಕರು ಸಮುದಾಯದಲ್ಲಿ ಅಂಗೀಕರಿಸಲ್ಪಡುವ ಶುದ್ಧೀಕರಣ ಆಚರಣೆಗೆ ಒಳಗಾಗಬೇಕಾಗುತ್ತದೆ.

ಅದರಂತೆ, ಯುವತಿಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ತಲೆ ಬೋಳಿಸಿಕೊಂಡು, ಮೇಕೆ, ಹಂದಿ ಮತ್ತು ಕೋಳಿಗಳನ್ನು ಬಲಿ ನೀಡಿ ಗ್ರಾಮಸ್ಥರಿಗೆ ಭವ್ಯ ಔತಣವನ್ನು ಏರ್ಪಡಿಸಿದ್ದಾರೆ ಎಂದು newindianexpress.com ವರದಿ ಹೇಳಿದೆ.

ಗ್ರಾಮದ ಯಾರೋ ಒಬ್ಬರು ಶುದ್ದೀಕರಣ ಆಚರಣೆಯನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ, ಜಿಲ್ಲಾಡಳಿತವು ಘಟನೆಯ ತನಿಖೆ ನಡೆಸುವಂತೆ ಕಾಶಿಪುರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅವರಿಗೆ ನಿರ್ದೇಶನ ನೀಡಿದೆ.

ಬ್ಲಾಕ್ ಮಟ್ಟದ ವಿಸ್ತರಣಾ ಅಧಿಕಾರಿ ನೇತೃತ್ವದ ತಂಡವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಬೈಗನಗುಡ ಗ್ರಾಮಕ್ಕೆ ಭೇಟಿ ನೀಡಿದೆ ಎಂದು ಬಿಡಿಒ ಬಿಜಯ್ ಸೋ ತಿಳಿಸಿದ್ದಾರೆ. ಅಧಿಕಾರಿಗಳ ತಂಡ ಶುದ್ದೀಕರಣ ನಡೆಸಿರುವ ಜನರನ್ನು ಭೇಟಿಯಾಗಿದ್ದಾರೆ. ಅವರು ಯಾವುದೇ ಬಲವಂತವಿಲ್ಲದೆ ತಮ್ಮ ಪದ್ಧತಿಯಂತೆ ಆಚರಣೆಯನ್ನು ಆಚರಿಸಿದ್ದೇವೆ ಎಂದು ವಿವರಿಸಿದ್ದಾರೆ. ಅಂತರ್ಜಾತಿ ವಿವಾಹಕ್ಕೆ ಸರ್ಕಾರದ ಸಹಾಯವನ್ನು ಪರಿಗಣಿಸಲು ಈ ವಿಷಯವನ್ನು ಉನ್ನತ ಅಧಿಕಾರಿಗಳ ಮುಂದೆ ಇಡಲಾಗಿದೆ” ಎಂದು ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯ: ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಕೈಬಿಟ್ಟು, ‘ಮುಸ್ಲಿಂ’ ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...