Homeಮುಖಪುಟಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

- Advertisement -
- Advertisement -

ಮಹರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ 40 ಶಾಸಕರು ಘರ್ ವಾಪ್ಸಿಗೆ ಉತ್ಸುಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದಿಂದ ತನ್ನ ಶಕ್ತಿಯು ಹಿಮ್ಮಡಿಯಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶವು ರಾಜ್ಯದಲ್ಲಿ ಯಾವ ದಿಕ್ಕಿನಲ್ಲಿ ಗಾಳಿ ಬೀಸುತ್ತಿದೆ ಎನ್ನುವುದನ್ನು ತೋರಿಸಿವೆ. ಇದರ ಪರಿಣಾಮ ವಿಧಾನಸಭಾ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ವಾಡೆತ್ತಿವಾರ್ ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ – ಕಾಂಗ್ರೆಸ್, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಮಗೆ ವಿಶ್ವಾಸವಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 150ರಲ್ಲಿ ಎಂವಿಎ ಮುಂದಿದೆ ಮತ್ತು 130 ಕ್ಷೇತ್ರಗಳಲ್ಲಿ ಮಹಾಯುತಿ (ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟ) ಮುಂದಿದೆ ಎನ್ನುವುದನ್ನು ತೋರಿಸಿದೆ ಎಂದು ವಾಡೆತ್ತಿವಾರ್ ಹೇಳಿದ್ದಾರೆ.

ಎಂವಿಎ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಶಿಂಧೆ ಶಿವಸೇನೆ ಮತ್ತು ಎನ್ಸಿಪಿ ಬಣಗಳ 40 ಶಾಸಕರು ಅರ್ಥ ಮಾಡಿಕೊಂಡಿದ್ದಾರೆ ಮತ್ತು ಇದೇ ಕಾರಣಕ್ಕೆ ಘರ್ ವಾಪ್ಸಿಗೆ ಮನವಿ ಮಾಡಿಕೊಂಡು ತಮ್ಮ ಮೂಲಪಕ್ಷಗಳ ನಾಯಕರಿಗೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ರಾಜ್ಯಾಧ್ಯಕ್ಷ ಜಯಂತ್ ಅವರು ಶಿಂಧೆ ಮತ್ತು ಅಜಿತ್‌ ಬಣಕ್ಕೆ ಸೇರಿದ ಕೆಲವು ಶಾಸಕರು ಪಕ್ಷಕ್ಕೆ ವಾಪಾಸ್ಸು ಬರಲು ಮನವಿಯನ್ನು ನೀಡಿರುವುದನ್ನು ದೃಢಪಡಿಸಿದ್ದಾರೆ.

ಕೇಂದ್ರೀಯ ಸಂಸ್ಥೆಗಳಿಂದ ರಕ್ಷಣೆಗಾಗಿ ನಾವು ಬಿಜೆಪಿ ಜೊತೆಗಿದ್ದೇವೆ. ಬಿಜೆಪಿ 2014 ಮತ್ತು 2019ರಲ್ಲಿ ಇದ್ದಷ್ಟು ಶಕ್ತಿಶಾಲಿಯಾಗಿಲ್ಲ. ಬಿಜೆಪಿ ಮೈತ್ರಿಕೂಟದ ಪಾಲುದಾರರು, ಮುಖ್ಯವಾಗಿ ಜೆಡಿ(ಯು) ಮತ್ತು ಟಿಡಿಪಿ ಬೇರೆ ದಾರಿ ಹಿಡಿದರೆ, ಮೋದಿ ಸರ್ಕಾರ ಪತನಗೊಳ್ಳಬಹುದು ಎಂದು ಅಜಿತ್ ಪವಾರ್ ಬಣದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಬಿಜೆಪಿಗೂ ನಮಗೂ ಮೂಲ ಸಂಬಂಧವಿಲ್ಲ, ನಮ್ಮದು ಕೆಲಸದ ಸಂಬಂಧ. ನಮ್ಮ ಸಿದ್ಧಾಂತಗಳು ಹೊಂದಿಕೆಯಾಗುವುದಿಲ್ಲ. ಬಿಜೆಪಿಯೊಂದಿಗೆ ಉಳಿಯುವ ಮೂಲಕ ನಾವು ನಮ್ಮ ಜಾತ್ಯತೀತ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಮತ ಬ್ಯಾಂಕನ್ನು ಕಳೆದುಕೊಂಡಿದ್ದೇವೆ. ನಾವು ಅದನ್ನು ಮರಳಿ ಪಡೆಯಲು ಬಯಸುತ್ತೇವೆ ಎಂದು ಅಜಿತ್‌ ಬಣದ ನಾಯಕರೋರ್ವರು ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಯನಾ ಕೊಠಾರಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...