PC: TFIPOST

2022 ರಲ್ಲಿ ನಡೆಯುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ಒಟ್ಟು 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಶೇ.40 ರಷ್ಟು ಎಂದರೆ 160 ಕ್ಷೇತ್ರಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸುವುದಾಗಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ದೇಶದ ಅತಿದೊಡ್ಡದಾದ ಮತ್ತು ರಾಜಕೀಯವಾಗಿ ಅತ್ಯಂತ ನಿರ್ಣಾಯಕ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ 2019 ರಿಂದ ಪ್ರಿಯಾಂಕಾಗಾಂಧಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶ ಉಸ್ತುವಾರಿ ಹೊತ್ತಿರುವ ಅವರು ಪಕ್ಷವನ್ನು ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿದ್ದಾರೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋಲುಂಡಿತ್ತು. ಒಟ್ಟು 403 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಲು ಸಾಧ್ಯವಾಗಿತ್ತು. ಬಿಜೆಪಿ 303 ಕ್ಷೇತ್ರಗಳಲ್ಲಿ ಗೆದ್ದು ಪಾರಮ್ಯ ಮೆರೆದಿತ್ತು. ಕಾಂಗ್ರೆಸ್‌ಗೆ ಪ್ರಶಾಂತ್ ಕಿಶೋರ್‌ನಂತಹ ರಾಜಕೀಯ ತಂತ್ರಜ್ಞ ಕೆಲಸ ಮಾಡಿದ್ದರೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮೌನವಹಿಸಿದೆ. ಆ ಸಾಧ್ಯತೆಯನ್ನು ಅದು ತಳ್ಳಿಹಾಕಿಲ್ಲ. “ಅಂತಹ ಪ್ರೊಜೆಕ್ಷನ್ ಅನ್ನು ಈಗಲೇ ನೀಡುವುದು ತೀರ ಮುಂಚಿತವಾಗುತ್ತದೆ. ಸೂಕ್ತ ಸಮಯ ಬರಲಿ” ಎಂದು ಪ್ರಿಯಾಂಕಾ ಗಾಂಧಿ ಕೆಲವು ದಿನಗಳ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ: ಪ್ರಿಯಾಂಕಾ ಗಾಂಧಿ ಸಿಎಂ ಅಭ್ಯರ್ಥಿ?

LEAVE A REPLY

Please enter your comment!
Please enter your name here