Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

- Advertisement -
- Advertisement -

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಮಾ.12) ಸಲ್ಲಿಸಿದೆ.

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

ಈ ಸಂಬಂಧ ವಿಚಾರಣಾ ಆಯೋಗವೂ ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗ ಕೂಲಂಕುಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಿದೆ ಎಂದು ಹೇಳಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರ ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ 26 ಜಲೈ 2019ರಿಂದ 31 ಮಾರ್ಚ್ 2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಬೇಕೆಂದು ತಿಳಿಸಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್‍ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ. ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ದಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿದೆ. ತನಿಖಾ ವರದಿಯು ಸುಮಾರು 20 ಸಾವಿರ ಪುಟಗಳನ್ನು ಹೊಂದಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ನಾರಾಯಣಪುರ ಕಾಲುವೆ ವರದಿ ಸಲ್ಲಿಕೆ 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾದ ಉಪ ಕಾಲುವೆಗಳ ಆಧುನೀಕರಣ ಕಾಮಗಾರಿ ಕುರಿತೂ ತನಿಖೆ ನಡೆಸಿರುವ ಆಯೋಗ 800 ಪುಟಗಳ ವರದಿ ಸಲ್ಲಿಸಿದೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1ರಿಂದ 18ರವರೆಗೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಅಂದಾಜು ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನ್ಯತೆಗಳನ್ನ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸರ್ಕಾರದ ನಿವೃತ್ತ ಕಾರ್ಯದರ್ಶಿ ಸಿದ್ದಗಂಗಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ತಾಂತ್ರಿಕ ಸಮಿತಿಯನ್ನು ವಿಸರ್ಜಿಸಿ, ವಿಚಾರಣಾ ಆಯೋಗಕ್ಕೆ ಹೆಚ್ಚಿನ ತನಿಖೆಯ ಜವಾಬ್ದಾರಿ ವಹಿಸಿತ್ತು.

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...