Homeಮುಖಪುಟಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ...

ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ ಆರೋಪ

- Advertisement -
- Advertisement -

ಕೋವಿಡ್ ಮೊದಲನೇ ಅಲೆಯ ಅವಧಿಯಲ್ಲಿ ಬಿ.ಎಸ್​ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ಬರೋಬ್ಬರಿ 40,000 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದ್ದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ದರು. ಪ್ರತಿ ಬೆಡ್‌ಗೆ 10 ಸಾವಿರ ರೂ. ಬಾಡಿಗೆ ಕೊಡಲಾಗಿತ್ತು. ಆ ಹಣದಲ್ಲಿ ಎರಡೆರಡು ಹೊಸ ಬೆಡ್​​ಗಳನ್ನು ಖರೀದಿಸಬಹುದಿತ್ತು. ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ ಎಂದಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ರೂ. ಬಿಲ್‌ ಮಾಡಿದ್ದರು. ಇಷ್ಟು ಹಣ ಬಡವರಾದವರು ಎಲ್ಲಿಂದ ತರಬೇಕು? ಈ ಬಗ್ಗೆ ನಾನು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಯಾರು ಯಾರು ಲೂಟಿ ಮಾಡಿ, ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದನ್ನು ಹೊರ ತೆಗೆಯುವೆ. ನಮ್ಮ ಸರ್ಕಾರವಿದ್ದರೇನು? ಬೇರೆ ಸರ್ಕಾರ ಇದ್ದರೇನು? ಕಳ್ಳರು ಕಳ್ಳರೇ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.

ಶಾಸಕ ಯತ್ನಾಳ್ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ ಮೂಲಕ ಪ್ರತಿಕ್ರಿಯಿಸಿದ್ದು, ಕೊರೊನಾ ಕಾಲದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...