Homeಮುಖಪುಟಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

ಉ.ಪ್ರದೇಶ: ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರ

- Advertisement -
- Advertisement -

ಕಳೆದ ನಾಲ್ಕು ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದು, ”40ವರ್ಷದ ವ್ಯಕ್ತಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ. ಈ ವೇಳೆ ಬಾಲಕಿಯರು ವಿರೋಧಿಸಿದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು  ತಿಳಿಸಿದ್ದಾರೆ.

”ನಿರಂತರ ಅತ್ಯಾಚಾರಕ್ಕೊಳಗಾದ 15 ಮತ್ತು 17 ವರ್ಷ ವಯಸ್ಸಿನ ಬಾಲಕಿಯರು ಆಘಾತಕ್ಕೊಳಗಾಗಿದ್ದರು. ಅವರು ಅರೆಮನಸ್ಸಿನಿಂದ ತರಗತಿಗಳಿಗೆ ಹಾಜರಾಗುವುದನ್ನು ಗಮನಿಸಿದ ಶಿಕ್ಷಕರೊಬ್ಬರು ಹಿರಿಯ ಸಹೋದರಿಯಿಂದ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು” ಎಂದು ಅಧಿಕಾರಿ ಹೇಳಿದರು.

ಬಾಲಕಿ ತಮ್ಮ ಕಷ್ಟವನ್ನು ಶಿಕ್ಷಕರ ಬಳಿ ಹೇಳಿಕೊಂಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಾಲೆಯಿಂದ ಹೊರಬಂದ ನಂತರ, ತಾಯಿ ಕೆಲಸದಿಂದ ಹಿಂತಿರುಗುವವರೆಗೆ ಉದ್ಯಾನವನದಲ್ಲಿ ಕುಳಿತುಕೊಳ್ಳುತ್ತಿದ್ದರು ಎಂದು ಸಹೋದರಿಯರು ಶಿಕ್ಷಕರಿಗೆ ತಿಳಿಸಿದ್ದಾರೆ. ತಮ್ಮ ತಂದೆ ಹಲವು ದಿನಗಳಿಂದ ಕೆಲಸವಿಲ್ಲದೇ ಇದ್ದು, ತಾಯಿ ಮಾತ್ರ ಕೆಲಸಕ್ಕೆ ಹೋಗಿ ನಮ್ಮನ್ನು ಸಾಕುತ್ತಿದ್ದಾರೆಂದು ಮಕ್ಕಳು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಮಸೂರಿ ಎಸಿಪಿ ನರೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರೇಮ ಪ್ರಸ್ತಾಪಕ್ಕೆ ತಿರಸ್ಕಾರ: ದಲಿತ ಯುವತಿಯ ಕತ್ತು ಸೀಳಿ ಬರ್ಬರವಾಗಿ ಕೊಂದ ಸವರ್ಣಿಯ ಯುವಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...