Homeಚಳವಳಿ‘400% ಶುಲ್ಕ ಹೆಚ್ಚಳ’: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಬೃಹತ್ ಪಂಜಿನ ಮೆರವಣಿಗೆ

‘400% ಶುಲ್ಕ ಹೆಚ್ಚಳ’: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಬೃಹತ್ ಪಂಜಿನ ಮೆರವಣಿಗೆ

- Advertisement -
- Advertisement -

ಉತ್ತರ ಪ್ರದೇಶದ ಅಲಹಾಬಾದ್ ವಿಶ್ವವಿದ್ಯಾನಿಲಯವು ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ವಿದ್ಯಾರ್ಥಿ ಒಕ್ಕೂಟವನ್ನು ಮರುಸ್ಥಾಪಿಸಲು ಒತ್ತಾಯಿಸಿ ಅಲ್ಲಿನ ವಿದ್ಯಾರ್ಥಿಗಳು ಗುರುವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದ್ದಾರೆ. ‘ಛಾತ್ರಸಂಘ ಸಂಯುಕ್ತ ಸಂಘರ್ಷ ಸಮಿತಿ’ಯ ಅಡಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು ವಿಶ್ವವಿದ್ಯಾನಿಲಯವು ಪದವಿಪೂರ್ವ ಶುಲ್ಕವನ್ನು ಸುಮಾರು 400% ದಷ್ಟು ಹೆಚ್ಚಿಸಿದೆ ಎಂದು ಆರೋಪಿಸಿದ್ದರೆ.

ಎಂಟು ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ನಿನ್ನೆ ಇಬ್ಬರು ವಿದ್ಯಾರ್ಥಿಗಳಾದ ಮಂಜಿತ್ ಪಟೇಲ್ ಮತ್ತು ರಾಹುಲ್ ಸರೋಜ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೆಚ್ಚಿಸಿದ ಶುಲ್ಕವನ್ನು ಹಿಂಪಡೆಯಬೇಕು ಎಂಬ ಬೇಡಿಕೆಯ ಮೇರೆಗೆ ವಿದ್ಯಾರ್ಥಿಗಳು ಕ್ಯಾಂಪಸ್‌ನಾದ್ಯಂತ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯ ಮೂಲಕ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮುಂದುವರಿಸುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.

ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ಆರಂಭಿಸಿದ ಆಂದೋಲನಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಸೋಮವಾರ ಬೆಂಬಲ ನೀಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ,“ಅಲಹಾಬಾದ್ ವಿಶ್ವವಿದ್ಯಾಲಯ 400% ದಷ್ಟು ಶುಲ್ಕ ಹೆಚ್ಚಳ ಮಾಡಿರುವುದು ಬಿಜೆಪಿ ಸರ್ಕಾರದ ಮತ್ತೊಂದು ಯುವಜನ ವಿರೋಧಿ ನಡೆಯಾಗಿದೆ” ಎಂದು ಹೇಳಿದ್ದಾರೆ.

“ಯುಪಿ ಮತ್ತು ಬಿಹಾರದ ಸಾಮಾನ್ಯ ಕುಟುಂಬಗಳ ಮಕ್ಕಳು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡುತ್ತಾರೆ. ಶುಲ್ಕವನ್ನು ಹೆಚ್ಚಿಸುವ ಮೂಲಕ ಸರ್ಕಾರವು ಈ ಯುವಕರಿಂದ ಶಿಕ್ಷಣವನ್ನು ಕಸಿದುಕೊಳ್ಳುತ್ತಿದೆ” ಎಂದು ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ವಿದ್ಯಾರ್ಥಿಗಳ ಮಾತನ್ನು ಆಲಿಸಿ ಶುಲ್ಕ ಹೆಚ್ಚಿಸುವ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿದ್ಯಾರ್ಥಿಗಳ ಹೋರಾಟಕ್ಕೆ ರಾಜ್ಯದ ವಿರೋಧ ಪಕ್ಷದ ನಾಯಕ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಬೆಂಬಲ ನೀಡಿದ್ದಾರೆ. ವಿದ್ಯಾರ್ಥಿ ಸಂಘಗಳನ್ನು “ಪ್ರಜಾಪ್ರಭುತ್ವದ ಪ್ರಾಥಮಿಕ ಭಾಗ” ಎಂದು ಕರೆದಿರುವ ಅಖಿಲೇಶ್‌ ಯಾದವ್, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯವು ನಡೆಸಿಕೊಂಡಿರುವ ರೀತಿಯು “ಬಿಜೆಪಿ ಸರ್ಕಾರದ ಹತಾಶತೆಯ ಸಂಕೇತವಾಗಿದೆ” ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಎಣಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ಇವಿಎಂ ಮತ್ತು ವಿವಿಪ್ಯಾಟ್‌ಗಳ ಎಲ್ಲಾ (ಶೇ.100) ಮತಗಳನ್ನು ತಾಳೆ ಮಾಡಿ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ...